• Home  
  • ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ (Kundapura: A pervert was making a video of sexual assault)
- ಅಪರಾಧ

ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ (Kundapura: A pervert was making a video of sexual assault)

Share: ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ  ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ (Kundapura) ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ನಡೆದ ಈ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದ್ದು, ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಶ್ರೇಯಸ್ ನಾಯ್ಕ (25) ಈ ಪ್ರಕರಣದ ಆರೋಪಿ. […]

ಕುಂದಾಪುರ: ಲೈಂಗಿಕ ದೌರ್ಜನ್ಯ ನಡೆಸಿ ವೀಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ

 ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ

(Kundapura) ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ನಡೆದ ಈ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದ್ದು, ಉದ್ಯಮಿಯೊಬ್ಬ

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ಶ್ರೇಯಸ್ ನಾಯ್ಕ (25) ಈ ಪ್ರಕರಣದ ಆರೋಪಿ.

ಈತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ.

ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

 ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ಈತನ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಟ ನಡೆಸಲಾಗುತ್ತಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.