• Home  
  • ಬಂಟಕಲ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಕರಿಗಾಗಿ   “ಪೈಥಾನ್ ಪ್ರೋಗ್ರಾಂಮಿಂಗ್” ಕಾರ್ಯಾಗಾರ (One day Python Programming workshop at SMVITM, Bantakal)
- ಶಾಲಾ ಕಾಲೇಜು

ಬಂಟಕಲ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಕರಿಗಾಗಿ   “ಪೈಥಾನ್ ಪ್ರೋಗ್ರಾಂಮಿಂಗ್” ಕಾರ್ಯಾಗಾರ (One day Python Programming workshop at SMVITM, Bantakal)

Share: ಬಂಟಕಲ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಕರಿಗಾಗಿ   “ಪೈಥಾನ್ ಪ್ರೋಗ್ರಾಂಮಿಂಗ್” ಕಾರ್ಯಾಗಾರ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು (Shri Madhwa Vadiraja Institute of Technology and Management) ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರ ಒಕ್ಕೂಟ ಇದರ ಸಹಯೋಗದೊಂದಿಗೆ “ಪೈಥಾನ್ ಪ್ರೋಗ್ರಾಮಿಂಗ್” ಕುರಿತು ಒಂದು ದಿನದ ಕಾರ್ಯಾಗಾರವನ್ನು ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರಿಗಾಗಿ  ಆಯೋಜಿಸಲಾಗಿತ್ತು.  ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿಯವರು ಕಾರ್ಯಕ್ರಮವನ್ನು […]

ಬಂಟಕಲ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಕರಿಗಾಗಿ   “ಪೈಥಾನ್ ಪ್ರೋಗ್ರಾಂಮಿಂಗ್” ಕಾರ್ಯಾಗಾರ

(Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು (Shri Madhwa Vadiraja Institute of Technology and Management) ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರ ಒಕ್ಕೂಟ ಇದರ ಸಹಯೋಗದೊಂದಿಗೆ “ಪೈಥಾನ್ ಪ್ರೋಗ್ರಾಮಿಂಗ್” ಕುರಿತು ಒಂದು ದಿನದ ಕಾರ್ಯಾಗಾರವನ್ನು ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರಿಗಾಗಿ  ಆಯೋಜಿಸಲಾಗಿತ್ತು.

 ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ಈ ಕಾರ್ಯಾಗಾರದ ಮುಖ್ಯ ಉದ್ದೇಶ ಶಿಕ್ಷಕರ ಜ್ಞಾನವನ್ನು ಹೆಚ್ಚಿಸುವುದಾಗಿದೆ ಎಂದು ಹೇಳಿ, ಕಾರ್ಯಕ್ರಮದಲ್ಲಿ ಭಾಗವಹಿಸಿದವರನ್ನು ಅಭಿನಂದಿಸಿದರು.

ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ (Dr. Thirumaleshwara Bhat, the Principal of SMVITM) ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯು ಈ ಹಿಂದೆಯು ಇಂತಹ ಕಾರ್ಯಾಗಾರವನ್ನು ನಡೆಸುವಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿಗೆ ಸತತವಾಗಿ ಬೆಂಬಲ ನೀಡಿದೆ. ಮುಂದೆಯೂ ಸಹಕಾರ ನೀಡಲಿದೆ ಎಂದ ಅವರು, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿದ್ದು ಅದಕ್ಕಾನುಗುಣವಾಗಿ ಶಿಕ್ಷಕರು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡ ಬೇಕಾಗಿದೆ ಎಂದರು.

 ಕಾರ್ಯಾಗಾರದ ಮುಖ್ಯ ಅತಿಥಿಗಳಾದ ಆನಂದತೀರ್ಥ ಮಹಾವಿದ್ಯಾಲಯದ ಉಪ ಪ್ರಾಂಶುಪಾಲೆ ಶ್ರೀಮತಿ ಕಮಲಾಕ್ಷಿ ಭಾಗವಹಿಸಿದ ಎಲ್ಲಾ ಪ್ರಾಧ್ಯಾಪಕರನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಾಗಾರವನ್ನು ನಡೆಸಲು ಅವಕಾಶ ನೀಡಿದ್ದಕ್ಕಾಗಿ ಸಂಸ್ಥೆಯ ಪ್ರಾಂಶುಪಾಲರಿಗೆ ಮತ್ತು ಆಡಳಿತ ಮಂಡಳಿಗೆ ಧನ್ಯವಾದ ತಿಳಿಸಿದರು.

 ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕರಾದ ಅರುಣ್ ಉಪಧ್ಯಾಯ ಕಾರ್ಯಕ್ರಮ ಸಂಯೋಜಿಸಿದರು. ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ರಂಜನ್  ಕುಮಾರ್, ಡಾ. ಗಣೇಶ್ ಪ್ರಸಾದ್ ಮತ್ತು ಶ್ರೀಮತಿ ಯಶಸ್ವಿನಿ ಎ. ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಿದರು.

 ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಉಪನ್ಯಾಸಕರ ಒಕ್ಕೂಟದ ಅಧ್ಯಕ್ಷ ರಾಮ ನಾಯಕ್ ಸ್ವಾಗತಿಸಿ, ವಂದಿಸಿದರು.  

Leave a comment

Your email address will not be published. Required fields are marked *

eMedia Kannada  @2025. All Rights Reserved.