ಉಡುಪಿ: ಸುಶ್ಮಿತಾ ಆಚಾರ್ಯಗೆ ಮಿಸ್ ಕೋಸ್ಟಲ್ – 2024 ಕಿರೀಟ
(Udupi) ಉಡುಪಿ: ಸುಶ್ಮಿತಾ ಆಚಾರ್ಯವರು ಈ ವರ್ಷದ ಮಿಸ್ ಕೋಸ್ಟಲ್ – 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಉಡುಪಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರತಿಭಾವಂತೆಯಾಗಿರುವ ಸುಶ್ಮಿತಾ ಆಚಾರ್ಯ, ಭರತನಾಟ್ಯ ಕಲಾವಿದೆಯೂ ಆಗಿದ್ದಾರೆ. ಈ ಮೊದಲು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಸದ್ಯ ಸಾಫ್ಟ್ ವೇರ್ ಇಂಜಿನಿಯರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ‘ಸುಜಾಸ್ ‘ನ ಜಯಲಕ್ಷ್ಮೀ ಇವರಿಗೆ ಮಾರ್ಗದರ್ಶನ ಮಾಡಿದ್ದರು.
ಇವರು ಮುಲ್ಕಿಯ ಕೆ. ಸತೀಶ್ ಆಚಾರ್ಯ, ಸ್ವಾತಿ ಆಚಾರ್ಯ ದಂಪತಿ ಪುತ್ರಿ.

