ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ
(Kota) ಕೋಟ, ಜೂ.30: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ
ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿಯವರು ತಮ್ಮ 97ನೇ ವಯಸ್ಸಿನಲ್ಲಿ ವಯೋ ಸಹಜ ಅಸೌಖ್ಯದಿಂದ ಭಾನುವಾರ ಮದ್ಯಾಹ್ನ ನಿಧನ ಹೊಂದಿದರು.
ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶ್ರೀನಿವಾಸ ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದ್ದಾಗಿದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು.
ಇವರ ಅಗಲುವಿಕೆಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ. ಕುಂದರ್ ಸಹಿತ ರಾಜ್ಯ, ರಾಷ್ಟ್ರ ಮಟ್ಟದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

