• Home  
  • ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Ullala Khazi Assayyid Fazal Koyamma Thangal passes away)
- ನಿಧನ

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Ullala Khazi Assayyid Fazal Koyamma Thangal passes away)

Share: ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ (Mangaluru) ಮಂಗಳೂರು: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(64) ಸೋಮವಾರ ಬೆಳಗ್ಗೆ ನಿಧನರಾದರು. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದಾರೆ.  ಇಂದು ಅಪರಾಹ್ನ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸಯ್ಯಿದ್ ಮದನಿ […]

ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ನಿಧನ

(Mangaluru) ಮಂಗಳೂರು: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ(64) ಸೋಮವಾರ ಬೆಳಗ್ಗೆ ನಿಧನರಾದರು.

ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದಾರೆ.

 ಇಂದು ಅಪರಾಹ್ನ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸಯ್ಯಿದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಬೆಳಗ್ಗೆ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಅಪರಾಹ್ನ 2 ಗಂಟೆಯ ವರೆಗೆ ಎಟ್ಟುಕ್ಕುಳಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ವಠಾರಕ್ಕೆ ತರಲಾಗುತ್ತದೆ. ಅಲ್ಲಿ ಸಂಜೆ 5 ಗಂಟೆಯ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಆ ಬಳಿಕ ಕೂರತ್ ಗೆ ಕೊಂಡೊಯ್ದು, ಅಲ್ಲಿ ದಫನ ಕಾರ್ಯ ನೆರವೇರಲಿದೆ.

ಸಂತಾಪ: ಖಾಝಿ ಕೂರತ್ ತಂಙಳ್ ನಿಧನಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಯೆನೆಪೊಯ ಅಬ್ದುಲ್ಲಾ ಕುಂಞಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.