ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವಿಂಗ್ ರೋಬೋಟ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ
(Bantakal) ಬಂಟಕಲ್: ಮಂಗಳೂರಿನ ಕಾಮೆಡ್‌ಕೇರ್ಸ್ ಇನ್ನೋವೇಶನ್ ಹಬ್ ಆಯೋಜಿಸಿದ್ದ “Tech-X 2024” ತಾಂತ್ರಿಕ ಸ್ಪರ್ಧೆಯಲ್ಲಿ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು “ಲೈನ್ ಫಾಲೋವಿಂಗ್ ರೋಬೋಟ್” ಸ್ಪರ್ಧೆಯಲ್ಲಿ ದ್ವೀತೀಯ ಬಹುಮಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳಾದ ಪವನ್ ಗೋಂಡ್, ವಿಶ್ವಾಸ್ ಭಟ್, ರಂಜನ್ ಪೂಜಾರಿ, ವಿಜೇತಾ, ಗಣಕಯಂತ್ರ ವಿಭಾಗ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಶ್ರೀ ಹರ್ಷ ಗುನಗಾ ತಾಂತ್ರಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

