ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಕಡಲು ಕೊರತೆಗೆ ತಾತ್ಕಾಲಿಕ ಬ್ರೇಕ್ ಭರವಸೆ
(Padubidri) ಪಡುಬಿದ್ರಿ: ಪಡುಬಿದ್ರಿ ನಡಿಪಟ್ಣ ಬಳಿಯ ಉಮಾಮಹೇಶ್ವರಿ ಡಿಸ್ಕೋ ಫಂಡಿನ ಅಪಾಯದಂಚಿನಲ್ಲಿರುವ ಕಟ್ಟಡ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಭೇಟಿ ನೀಡಿ ತಾತ್ಕಾಲಿಕ ಪರಿಹಾರವಾಗಿ ಸಮುದ್ರ ತಟಕ್ಕೆ ಕಲ್ಲು ಹಾಕುವ ಬಗ್ಗೆ ಭರವಸೆ ವ್ಯಕ್ತ ಪಡಿಸಿದ್ದಾರೆ.
ಕೆಲವು ದಿನಗಳಿಂದ ಕಡಲು ಕೊರೆತ ತೀವ್ರಗೊಂಡಿದ್ದರೂ, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಹಿನ್ನಲೆಯಲ್ಲಿ ಸಮಸ್ಯೆ ಉಲ್ಭಣಗೊಂಡಿದೆ. ಸ್ಥಳೀಯರು ಶಾಶ್ವತ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.
ಸದ್ಯ ಅಪಾಯದಂಚಿನಲ್ಲಿರುವ ಮೀನುಗಾರಿಕಾ ಪರಿಕರಗಳ ಶೇಕರಣಾ ಕೊಠಡಿ ಸಮುದ್ರ ಪಾಲಾಗುವ ಸಾಧ್ಯತೆ ಇರುವ ಕಾರಣ ಸುಮಾರು 60ಲಕ್ಷ ರೂಪಾಯಿಗಳ ಪರಿಕರಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿಯವರ ಗಮನಕ್ಕೆ ಮೀನುಗಾರ ಪ್ರಮುಖ ತಂದಿದ್ದಾರೆ.
ತಾತ್ಕಾಲಿಕವಾಗಿ ಬಂಡೆ ಹಾಕುವ ಕಾರ್ಯ ಇದೀಗ ಪ್ರಾರಂಭಿಸಲಾಗುವುದು. ಅದು ಈ ಕಡಲ ಅಬ್ಬರದ ಮಧ್ಯೆ ಎಷ್ಟು ಪರಿಣಾಮಕಾರಿ ಎಂಬುದು ತಿಳಿಯದು. ಈ ಪ್ರದೇಶದಕ್ಕೆ ಯಾರೂ ಬಾರದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಯವರೊಂದಿಗೆ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಕಾಪು ತಹಶಿಲ್ದಾರ್ ಡಾ. ಪ್ರತಿಭಾ, ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶೋಭಾ ಹಾಗೂ ಸ್ಥಳೀಯ ಮೀನುಗಾರ ಪ್ರಮುಖರು ಉಪಸ್ಥಿತರಿದ್ದರು.
