ಉಚ್ಚಿಲ ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇಗುಲದಲ್ಲಿ ಅಪ್ಪ ಸೇವೆ
(Uchila)ಉಚ್ಚಿಲ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇಗುಲದಲ್ಲಿ ವಾರ್ಷಿಕ ಸಾಮೂಹಿಕ ಅಪ್ಪ ಸೇವೆ ಸೋಮವಾರ ಸಂಜೆ ಸಂಪನ್ನಗೊಂಡಿತು.
ಅರ್ಚಕ ಗೋವಿಂದ ಭಟ್ ನೇತೃತ್ವದಲ್ಲಿ ಪೂಜಾ ವಿಧಿ – ವಿಧಾನ ನೆರವೇರಿತು.
ಮಹಾ ಮಂಗಳಾರತಿಯ ನಂತರ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ದೇವಳದ ಆಡಳಿತಾಧಿಕಾರಿ, ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್, ದೇವಳದ ಅರ್ಚಕ ವೃಂದ, ಸಿಬ್ಬಂದಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.
