• Home  
  • ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup : Vanamahothsava celebration at Dandatheertha Education Institute)
- ಶಾಲಾ ಕಾಲೇಜು

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup : Vanamahothsava celebration at Dandatheertha Education Institute)

Share: ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ (Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸೀ ಸಂಸ್ಥೆಯ ಸಹಕಾರದಲ್ಲಿ ವನಮಹೋತ್ಸವ ಆಚರಿಸಲಾಯಿತು.   ಕಾಪು ಜೇಸೀ ಅಧ್ಯಕ್ಷೆ ಸುಖಾಲಾಕ್ಷಿ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಕ್ಕಳಿಗೆ ಗಿಡ ವಿತರಿಸಿ, ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಾದ ತಾವು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆಗಳಲ್ಲಿ ಗಿಡ ನೆಟ್ಟು ಅದನ್ನು ಪೋಷಿಸಬೇಕು ಹಾಗೂ ಸುಂದರ ಪರಿಸರವನ್ನು ನಿರ್ಮಿಸಿ ಅರೋಗ್ಯವಂತ ಸಮಾಜವನ್ನು ರೂಪಿಸಬೇಕು ಎಂಬ ಸಂದೇಶ […]

ಕಾಪು : ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಆಚರಣೆ

(Kaup) ಕಾಪು: ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಕಾಪು ಜೇಸೀ ಸಂಸ್ಥೆಯ ಸಹಕಾರದಲ್ಲಿ ವನಮಹೋತ್ಸವ ಆಚರಿಸಲಾಯಿತು.

  ಕಾಪು ಜೇಸೀ ಅಧ್ಯಕ್ಷೆ ಸುಖಾಲಾಕ್ಷಿ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅವರು ಮಕ್ಕಳಿಗೆ ಗಿಡ ವಿತರಿಸಿ, ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಾದ ತಾವು ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಮನೆ, ಶಾಲೆಗಳಲ್ಲಿ ಗಿಡ ನೆಟ್ಟು ಅದನ್ನು ಪೋಷಿಸಬೇಕು ಹಾಗೂ ಸುಂದರ ಪರಿಸರವನ್ನು ನಿರ್ಮಿಸಿ ಅರೋಗ್ಯವಂತ ಸಮಾಜವನ್ನು ರೂಪಿಸಬೇಕು ಎಂಬ ಸಂದೇಶ ನೀಡಿದರು.

  ದಂಡತೀರ್ಥ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೋಡ್ರಿಗಸ್‌ರವರು ಮಾತನಾಡಿ, ಧಾರ್ಮಿಕ ನಂಬಿಕೆಯೊಂದಿಗೆ ನಾವು ಪರಿಸರವನ್ನು ರಕ್ಷಿಸುತ್ತಿದ್ದೇವೆ. ಪ್ರತಿಯೊಬ್ಬರು ಕೂಡಾ ಇದರ ಮಹತ್ವವನ್ನು ಅರಿತು ಸುಂದರ ವಾತಾವರಣವನ್ನು ನಿರ್ಮಿಸಬೇಕೆಂಬ ಕಿವಿ ಮಾತನ್ನು ಹೇಳಿದರು.

 ಸಮಾರಂಭದಲ್ಲಿ ಎನ್‌.ಸಿ.ಸಿ., ಎನ್.ಎಸ್.ಎಸ್. ಸ್ಕೌಟ್ಸ್, ಗೈಡ್ಸ್‌ ವಿದ್ಯಾರ್ಥಿಗಳು, ಹಾಗೂ ವಿವಿಧ ಘಟಕಗಳ, ನಿರ್ದೇಶಕರುಗಳಾದ ತೇಜಶ್ರೀ, ವೀಣಾ ನಾಯಕ್, ಉದಯಕುಮಾರ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥೆ ಕೃಪಾ, ಜೇಸೀಯ ಪೂರ್ವಾಧ್ಯಕ್ಷ ರಮೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲ ನೀಲಾನಂದ್ ನಾಯ್ಕ ಸ್ವಾಗತಿಸಿದರು.

 ಪ್ರಾಥಮಿಕ ಶಾಲೆ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನಸ್ ವಂದಿಸಿದರು.   ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.