ಎಸ್ಕೆಪಿಎ ಕಾಪು ವಲಯದ ವತಿಯಿಂದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ
(Kaup) ಕಾಪು : ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಾಪು ವಲಯದ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಕಾಪುವಿನ K1 ಹೋಟೆಲ್ನಲ್ಲಿ ಜರಗಿತು.
ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ವೃತ್ತಿಯ ಒತ್ತಡದ ನಡುವೆ ಕುಟುಂಬ ಸಮ್ಮಿಲನದಂತಹ ಕಾರ್ಯಕ್ರಮಗಳು ಸದಸ್ಯರಿಗೆ ಅನಿವಾರ್ಯ. ಬಾಂಧವ್ಯವನ್ನು ಉಳಿಸಿ ಬೆಳೆಸಲು ಸಹಕಾರಿಯಾಗಿದೆ ಎಂದರು.
ಕಾಪು ವಲಯದ ಅಧ್ಯಕ್ಷ ಸಚಿನ್ ಉಚ್ಚಿಲ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಕಲಾಶ್ರೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಬಂಟ್ವಾಳ, ಕಾಪು ವಲಯದ ಅಧ್ಯಕ್ಷ ಸಚಿನ್ ಉಚ್ಚಿಲ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್, ಕಾಪು ವಲಯದ ಉಪಾಧ್ಯಕ್ಷರುಗಳಾದ ಸಂತೋಷ್ ಕಾಪು, ಸತೀಶ್ ಎರ್ಮಾಳು, ವಲಯದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್, ಕೋಶಾಧಿಕಾರಿ ಕಿರಣ್ ಕಾಪು ಉಪಸ್ಥಿತರಿದ್ದರು.
ಸಚಿನ್ ಉಚ್ಚಿಲ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಶ್ವತ್ ಪೂಜಾರಿ ನಿರೂಪಿಸಿದರು. ವಲಯದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್ ವಂದಿಸಿದರು.

