• Home  
  • ಪಡುಬಿದ್ರಿ: ಅದಾನಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ (Padubidri: Distribution of Educational tools to students of kannada Medium schools by Adani Foundation)
- social service - ವಿಡಿಯೋ

ಪಡುಬಿದ್ರಿ: ಅದಾನಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ (Padubidri: Distribution of Educational tools to students of kannada Medium schools by Adani Foundation)

Share: ಪಡುಬಿದ್ರಿ: ಅದಾನಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ 76 ಶಾಲೆಗಳ 6,800 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ : ಕಿಶೋರ್‌ ಆಳ್ವ (Padubidri) ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ಅದಾನಿ ಸಂಸ್ಥೆಯ ವತಿಯಿಂದ ಸ್ಥಾವರದ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ  ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಈ ಸಂದರ್ಭ ಅದಾನಿ ಫೌಂಡೇಷನ್ ಅಧ್ಯಕ್ಷರಾದ ಕಿಶೋರ್ ಆಳ್ವ ಮಾತನಾಡಿ, ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಳ್ಳುವುದರ ಜೊತೆಗೆ ಸ್ಥಾವರದ ಆಸುಪಾಸಿನ […]

ಪಡುಬಿದ್ರಿ: ಅದಾನಿ ಸಂಸ್ಥೆಯ ವತಿಯಿಂದ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ

76 ಶಾಲೆಗಳ 6,800 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ : ಕಿಶೋರ್‌ ಆಳ್ವ

(Padubidri) ಪಡುಬಿದ್ರಿ : ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ಅದಾನಿ ಸಂಸ್ಥೆಯ ವತಿಯಿಂದ ಸ್ಥಾವರದ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ  ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

ಈ ಸಂದರ್ಭ ಅದಾನಿ ಫೌಂಡೇಷನ್ ಅಧ್ಯಕ್ಷರಾದ ಕಿಶೋರ್ ಆಳ್ವ ಮಾತನಾಡಿ, ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಳ್ಳುವುದರ ಜೊತೆಗೆ ಸ್ಥಾವರದ ಆಸುಪಾಸಿನ ಕನ್ನಡ ಮಾಧ್ಯಮದ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿ ಎಸ್ ಆರ್ ಯೋಜನೆಯಡಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು ರೂ. 60 ಲಕ್ಷ ಮೊತ್ತದ ಶಿಕ್ಷಣ ಪರಿಕರಗಳನ್ನು 76 ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 6,800 ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತದೆ.

ಪ್ರತಿ ವಾರ್ಷಿಕ ಸಾಲಿನ ಅದಾನಿ ಸಿಎಸ್‌ಆರ್ ಅನುದಾನದಲ್ಲಿ ಶೇ. 20ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನಿಯೋಜಿಸುತ್ತಿದೆ. ಅದಾನಿ ಸಂಸ್ಥೆಯು ಕರಾವಳಿ ಪ್ರದೇಶದಲ್ಲಿ ಉಡುಪಿ ಉಷ್ಣ ವಿದ್ಯುತ್ ಸ್ಥಾವರದ ಜೊತೆಗೆ, ಮಂಗಳೂರಿನ ವಿಮಾನ ನಿಲ್ದಾಣ, ಗ್ಯಾಸ್ ಪೈಪ್‌ಲೈನ್ ಯೋಜನೆ, ಸಿಮೆಂಟ್ ಕೈಗಾರಿಕಾ ಘಟಕದ ವಿಸ್ತರಣೆ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಕೈಗಾರಿಕಾ ಅಭಿವೃದ್ಧಿಯ ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ಅನೇಕ ಸಾಮಾಜಿಕ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಅನುಕೂಲವಾಗುತ್ತದೆ ಎಂದು ಕಿಶೋರ್‌ ಆಳ್ವ ಹೇಳಿದರು.

 ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿಯವರು ಮಾತನಾಡಿ, ಅದಾನಿ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಸುಮಾರು ಒಂದು ದಶಕದಿಂದ ಹಲವಾರು ಸಾಮಾಜಿಕ ಅಭಿವೃದ್ಧಿ ಕೆಲಸಗಳನ್ನು ನೆರೆ ಗ್ರಾಮಗಳಲ್ಲಿ ಹಮ್ಮಿಕೊಂಡು ಬರುತ್ತಿದ್ದು, ಪಂಚಾಯತ್ ಹಾಗೂ ಗ್ರಾಮಸ್ಥರ ವಿಶ್ವಾಸವನ್ನು ಗೆಲ್ಲುವುದರಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.

 ಕಾಪು ತಾಲೂಕು ಯುವಜನ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ ಸೂಡ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾರವರು ಮಾತನಾಡಿದರು.

 ಈ ಸಂದರ್ಭ ಸ್ಥಾವರದ ಆಸುಪಾಸಿನ ವಿವಿಧ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಶಾಲಾ ಮುಖ್ಯ ಶಿಕ್ಷಕರು, ಅದಾನಿ ಫೌಂಡೇಶನ್ ಸಂಸ್ಥೆಯ ಅನುದೀಪ್, ಧೀರಜ್, ಶುಭಮಂಗಳ ಉಪಸ್ಥಿತರಿದ್ದರು.

 ಅದಾನಿ ಸಮೂಹದ ಅಸೋಸಿಯೇಟ್ ಜನರಲ್ ಮ್ಯಾನೇಜರ್ ರವಿ ಆರ್. ಜೇರೆ ಸ್ವಾಗತಿಸಿ, ವಂದಿಸಿದರು.

  ಶಿಕ್ಷಕ ಸುಧಾಕರ್ ಶೆಣೈ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.