• Home  
  • ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ (Padubidri Circle level boys and girls Kabaddi tournament at Tenka Yermal)
- ಕ್ರೀಡೆ - ವಿಡಿಯೋ - ಶಾಲಾ ಕಾಲೇಜು

ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ (Padubidri Circle level boys and girls Kabaddi tournament at Tenka Yermal)

Share: ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಪಡುಬಿದ್ರಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಶಾಲಾ ಮೈದಾನದಲ್ಲಿ ಶನಿವಾರ ನಡೆದ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ನೆರವೇರಿತು. ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಶಾಲಾ ಶಿಸ್ತಿನೊಂದಿಗೆ ಸ್ಪರ್ಧಾ ಮನೋಭಾವನೆ ಬೆಳೆಸಿಕೊಂದು […]

ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

ಪಡುಬಿದ್ರಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಶಾಲಾ ಮೈದಾನದಲ್ಲಿ ಶನಿವಾರ ನಡೆದ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ನೆರವೇರಿತು.

ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಅವರು ಮಾತನಾಡಿ, ಶಾಲಾ ಶಿಸ್ತಿನೊಂದಿಗೆ ಸ್ಪರ್ಧಾ ಮನೋಭಾವನೆ ಬೆಳೆಸಿಕೊಂದು ಉತ್ತಮ ಕ್ರೀಡಾಪಟುಗಳಾಗಿ ಎಂದರು.

  ದೈಹಿಕ ಶಿಕ್ಷಣ ತಾಲೂಕು ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಮತ್ತು ಎರ್ಮಾಳು ತೆಂಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

 ಪಡುಬಿದ್ರಿ ವೃತ್ತದ ೧೬ ಶಾಲೆಯ ಬಾಲಕ ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು.

ತೆಂಕ ಗ್ರಾಪಂ ಅಧ್ಯಕ್ಷೆ ಸುರೇಖಾ, ಉಪಾಧ್ಯಕ್ಷೆ ಕಸ್ತೂರಿ ಪ್ರವೀಣ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೋಮಯ್ಯ ಉಪಸ್ಥಿತರಿದ್ದರು.

 ಮುಖ್ಯೋಪಾಧ್ಯಾಯಿನಿ ವಿನೋದ ಸ್ವಾಗತಿಸಿ,  ವಂದಿಸಿದರು. ಶಿಕ್ಷಕಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.