• Home  
  •   ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)
- PROBLEMS

  ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ (Action of Cancelation of Kanchinadka Toll gate : Minister Laxmi Hebbalkar)

Share: ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ   ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್ ‌ (Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.  ಈ ವೇಳೆ ಮಾತನಾಡಿದ ಸಚಿವರು, […]

ಕಂಚಿನಡ್ಕ ಟೋಲ್ ಗೇಟ್ ರದ್ದತಿ ಕುರಿತಂತೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ

  ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ : ಲಕ್ಷ್ಮೀ ಹೆಬ್ಬಾಳ್ಕರ್

(Padubidri) ಪಡುಬಿದ್ರಿ: ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್ ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.

 ಈ ವೇಳೆ ಮಾತನಾಡಿದ ಸಚಿವರು, ಸ್ಥಳೀಯರ ವಿರೋಧದ ನಡುವೆ ಟೋಲ್ ಗೇಟ್ ನಿರ್ಮಿಸುವುದು‌ ಸರಿಯಲ್ಲ. ದಿನಂಪ್ರತಿ ಓಡಾಡುವ ರಸ್ತೆಗೆ ಎರಡೆರಡು ಬಾರಿ ಟೋಲ್ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

 ನಾನು ಕೊಟ್ಟ ಮಾತನ್ನು ಎಂದೂ ತಪ್ಪಿದವಳಲ್ಲ. ಕಳೆದ ತಿಂಗಳು ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕಾಲೇಜಿನ ರದ್ದತಿ ಆದೇಶವನ್ನು ವಾಪಸ್ ಪಡೆಯಲಾಗಿದೆ. ಕೊಟ್ಟ ಮಾತಿನಂತೆ ನಡೆದ ಫಲವಾಗಿ ಇಂದು ನೌಕರರು ನೆಮ್ಮದಿಯಿಂದ ಇದ್ದಾರೆ. ಈಗ ಟೋಲ್ ಗೇಟ್ ವಿಚಾರದಲ್ಲಿ ಜನರ ಪರ ಇರುವೆ ಎಂದು ಸಚಿವರು ತಿಳಿಸಿದರು.

  ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ ಆ. ೨೪ರ ಸಾರ್ವಜನಿಕ ಪ್ರತಿಭಟನೆಯ ಕಾವು ಏರುತ್ತಿದೆ. ಪಡುಬಿದ್ರಿಯಿಂದ ಕಾರ್ಕಳದವರೆಗೂ ಇರುವ ಸುಮಾರು ೪೦ ಗ್ರಾಮಗಳ ಜನತೆಗೆ ಕಬ್ಬಿಣದ ಕಡಲೆಯಾಗಬಲ್ಲ ಕಂಚಿನಡ್ಕ ಟೋಲ್‌ಗೇಟ್ ತಮಗೆ ಬೇಡವೇ ಬೇಡ ಎಂದರು.

ಹೋರಾಟ ಸಮಿತಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಅವರು ಮಾತನಾಡಿ, ನಾವು ಪ್ರಸ್ತಾವಿತ ಟೋಲ್‌ಗೇಟ್‌ಗೆ ಸಂಪೂರ್ಣ ವಿರೋಧ ವ್ಯಕ್ತ ಪಡಿಸುತ್ತೇವೆ ಎಂದರು.

ಸಮಿತಿಯು ಸಿದ್ಧಪಡಿಸಿದ ಈ ಕುರಿತಾದ ಮನವಿಯೊಂದನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಸಂದರ್ಭ ಅವರಿಗೆ ನೀಡಲಾಯಿತು

ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ| ಅರುಣ್ ಕುಮಾರ್, ಉಡುಪಿ ಜಿ. ಪಂ. ಸಿಇಒ ಪ್ರತೀಕ್ ಬಾಯಲ್, ವೈ. ಸುಕುಮಾರ್, ನವೀನ್‌ಚಂದ್ರ ಜೆ. ಶೆಟ್ಟಿ, ಲಕ್ಷ್ಮಣ ಶೆಟ್ಟಿ ಅರಂತಡೆ, ಪ್ರಸಾದ್ ಕಾಂಚನ್, ಡಾ| ದೇವಿಪ್ರಸಾದ್ ಶೆಟ್ಟಿ,  ಗಣೇಶ್ ಕೋಟ್ಯಾನ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮ್ಮದ್, ಉದಯ ಶೆಟ್ಟಿ ಇನ್ನ, ರೇಶ್ಮಾ ಉದಯ ಶೆಟ್ಟಿ, ದೀಪಕ್ ಕುಮಾರ್ ಇನ್ನ, ಶಶಿಕಾಂತ್ ಪಡುಬಿದ್ರಿ, ಜಯ ಶೆಟ್ಟಿ ಪದ್ರ, ಮಿಥುನ್ ಹೆಗ್ಡೆ, ಚಂದ್ರಹಾಸ ಶೆಟ್ಟಿ ಇನ್ನ, ಶಶಿಧರ ಶೆಟ್ಟಿ ಬೆಳ್ಮಣ್, ಸುಧೀರ್ ಕರ್ಕೇರ, ಗಣೇಶ್ ಶೆಟ್ಟಿ ಸಾಂತೂರು, ಜಯ ಕೋಟ್ಯಾನ್ ಇನ್ನ, ರವಿ ಶೆಟ್ಟಿ ಪಾದೆಬೆಟ್ಟು, ಹರೀಶ್ ಶೆಟ್ಟಿ ಪಾದೆಬೆಟ್ಟು ಮತ್ತು ನೂರಾರು ಮಂದಿ ಪ್ರತಿಭಟನಾಕಾರು ಉಪಸ್ಥಿತರಿದ್ದರು.  

  ಸರ್ವಜ್ಞ ತಂತ್ರಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.