• Home  
  • ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೇ  ಸ್ವಾತಂತ್ರ್ಯ ದಿನಾಚರಣೆ (78th Indipendent Celebration for Kaup Dandatheertha Education Trust)
- fastival

ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೇ  ಸ್ವಾತಂತ್ರ್ಯ ದಿನಾಚರಣೆ (78th Indipendent Celebration for Kaup Dandatheertha Education Trust)

Share: ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೇ  ಸ್ವಾತಂತ್ರ್ಯ ದಿನಾಚರಣೆ   (Kaup) ಕಾಪು: ಕಾಪುವಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು.  ಮುಖ್ಯ ಅತಿಥಿಯಾಗಿ ಕಾಪು ರೋಟರಿ ಕ್ಲಬ್ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್ಯ ಮಾತನಾಡಿ,  ದೇಶದಾದ್ಯಂತ ಇಂದು ಶಾಲಾ-ಕಾಲೇಜು, ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ತ್ಯಾಗ – ಬಲಿದಾನ ಗೈದ ವೀರ ನಾಯಕರನ್ನು […]

ಕಾಪು: ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೇ  ಸ್ವಾತಂತ್ರ್ಯ ದಿನಾಚರಣೆ

  (Kaup) ಕಾಪು: ಕಾಪುವಿನ ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ 78ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು.

 ಮುಖ್ಯ ಅತಿಥಿಯಾಗಿ ಕಾಪು ರೋಟರಿ ಕ್ಲಬ್ ಅಧ್ಯಕ್ಷರಾದ ಬಾಲಕೃಷ್ಣ ಆಚಾರ್ಯ ಮಾತನಾಡಿ,  ದೇಶದಾದ್ಯಂತ ಇಂದು ಶಾಲಾ-ಕಾಲೇಜು, ಸರಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶಕ್ಕಾಗಿ ತ್ಯಾಗ – ಬಲಿದಾನ ಗೈದ ವೀರ ನಾಯಕರನ್ನು ಸ್ಮರಿಸುತ್ತಿದ್ದೇವೆ. ವಿದ್ಯಾರ್ಥಿಗಳಾದ ತಾವು ಇಂತಹ ನಾಯಕರ ದೇಶಭಕ್ತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಮೂಡಿಬರಬೇಕು ಹಾಗೂ ಪರಸ್ಪರ ಸಮಾನತೆ, ಪ್ರೀತಿ, ಸಹಬಾಳ್ವೆಯಿಂದ ಜೀವನ ನಡೆಸಬೇಕು ಎಂಬ ಸಂದೇಶ ನೀಡಿದರು.

 ಸಮಾರಂಭದಲ್ಲಿ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯಾರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ಹಾಗೂ ಶಿಕ್ಷಕ – ಶಿಕ್ಷಕೇತರರು ಉಪಸ್ಥಿತರಿದ್ದರು.    ವಿದ್ಯಾರ್ಥಿ ರಿತಿಕಾ. ಆರ್. ಶೆಟ್ಟಿ ಕಾರ್ಯಕ್ರಮದ ಕುರಿತು ಮಾತನಾಡಿದರು. ಕುಶಿ. ಆರ್. ಶೆಟ್ಟಿ ಸ್ವಾಗತಿಸಿದರು. ಅಮೂಲ್ಯ ರಾವ್ ನಿರೂಪಿಸಿದರು. ಶಿಫಾನ ವಂದಿಸಿದರು

Leave a comment

Your email address will not be published. Required fields are marked *

eMedia Kannada  @2025. All Rights Reserved.