• Home  
  • ಫರಂಗಿಪೇಟೆ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ (Bus overturns near Faragipete many injured)
- ಅಪಘಾತ

ಫರಂಗಿಪೇಟೆ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ (Bus overturns near Faragipete many injured)

Share: ಫರಂಗಿಪೇಟೆ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ (Banwala) ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫರಂಗಿಪೇಟೆ ಬಳಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಹಲವಾರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.  ರಾಜೇಶ್ವರೀ(42), ನಂದಕುಮಾರ್ (21), ಕಾವ್ಯಶ್ರೀ(23), ವಿನ್ಸೆಂಟ್ ಪಿಂಟೋ(48), ಸುಕೇಶ್ ರೈ (33), ಕೊಟ್ರೇಶಪ್ಪ(61), ಅಜೀಜ್ (26)ರವರು ಗಾಯಗೊಂಡು ಮಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನುಕೆಲವರು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು […]

ಫರಂಗಿಪೇಟೆ ಬಳಿ ಬಸ್ ಪಲ್ಟಿ: ಹಲವರಿಗೆ ಗಾಯ

(Banwala) ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫರಂಗಿಪೇಟೆ ಬಳಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.
 ಘಟನೆಯಿಂದ ಹಲವಾರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

 ರಾಜೇಶ್ವರೀ(42), ನಂದಕುಮಾರ್ (21), ಕಾವ್ಯಶ್ರೀ(23), ವಿನ್ಸೆಂಟ್ ಪಿಂಟೋ(48), ಸುಕೇಶ್ ರೈ (33), ಕೊಟ್ರೇಶಪ್ಪ(61), ಅಜೀಜ್ (26)ರವರು ಗಾಯಗೊಂಡು ಮಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಇನ್ನುಕೆಲವರು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.
 ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರು ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಖಲಿಸಲು ನೆರವಾದರು.
ಪ್ರಯಾಣಿಕರು ಬೆಳಗ್ಗಿನ ನಿದ್ದೆಯ ಮಂಪರಿನಲ್ಲಿದ್ದು, ಘಟನೆಯಿಂದ ಆತಂಕಗೊಂಡಿದ್ದರು ಎಂದು ತಿಳಿದು ಬಂದಿದೆ.

 ಸುದ್ದಿ ತಿಳಿದ ಬಂಟ್ವಾಳ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ರಸ್ತೆಗೆ ಉರುಳಿ ಬಿದ್ದಿದ್ದ ಬಸ್ಸನ್ನು ಬದಿಗೆ ಸರಿಸುವ ಮೂಲಕ ಇತರ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.