• Home  
  • ಕಾಪು : ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ (Kaup : 170th Birth anniversary of Brahma Shree Narayana Guru on behalf of Thaluk Administration)
- fastival

ಕಾಪು : ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ (Kaup : 170th Birth anniversary of Brahma Shree Narayana Guru on behalf of Thaluk Administration)

Share: ಕಾಪು : ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜನ್ಮ ದಿನಾಚರಣೆ ಕಾಪು : ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಾಪು ಶಾಸಕ‌ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಸಮಸ್ತ ಹಿಂದುಳಿದ ವರ್ಗಗಳ ಸಮುದಾಯನ್ನು ಕಾಡುತ್ತಿದ್ದ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ, ಬಾಲ್ಯ ವಿವಾಹ ಸಹಿತ ಹಲವಾರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ […]

ಕಾಪು : ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜನ್ಮ ದಿನಾಚರಣೆ

ಕಾಪು : ತಾಲೂಕು ಆಡಳಿತದ ವತಿಯಿಂದ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಪು ಶಾಸಕ‌ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ಅವರು ಈ ಸಂದರ್ಭ ಮಾತನಾಡಿ, ಸಮಸ್ತ ಹಿಂದುಳಿದ ವರ್ಗಗಳ ಸಮುದಾಯನ್ನು ಕಾಡುತ್ತಿದ್ದ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ, ಬಾಲ್ಯ ವಿವಾಹ ಸಹಿತ ಹಲವಾರು ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಅವರ ಸಂದೇಶವನ್ನು ನಾವು ಜೀವನದುದ್ದಕ್ಕೂ ಪಾಲಿಸೋಣ ಎಂದರು.

 ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಪು ತಹಶೀಲ್ದಾರ್ ಡಾ.  ಪ್ರತಿಭಾ ಆರ್ ವಹಿಸಿದ್ದರು.

 ಪತ್ರಕರ್ತ ರಾಕೇಶ್ ಕುಂಜೂರು ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನಾದರ್ಶ ಮತ್ತು ಸಂದೇಶದ ಕುರಿತಾಗಿ ಮಾತನಾಡಿದರು.

 ಈ ಸಂದರ್ಭ  ತಾಲೂಕು ಪಂಚಾಯತ್  ಕಾರ್ಯನಿರ್ವಹಣಾಧಿಕಾರಿ,  ಜೇಮ್ಸ್ ಡಿ ಸಿಲ್ವ,  ತಾಲೂಕಿನ ಬಿಲ್ಲವ ಸಂಘದ ಮುಖಂಡರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.