# Tags
#ಮನೋರಂಜನೆ

 25 ದಿನ ಪೂರೈಸಿದ “ಅನರ್ಕಲಿ” ತುಳು ಸಿನಿಮಾ (Tulu Movie “Anarkali” completed 25 days)

25 ದಿನ ಪೂರೈಸಿದಅನರ್ಕಲಿತುಳು ಸಿನಿಮಾ

(Mangaluru) ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾ  25 ದಿಗಳನ್ನು ಪೂರೈಸಿ ಯಶಸ್ವಿ ಪ್ರದರ್ಶನಗಳನ್ನು ಕಾಣುತ್ತಿದೆ.

 ಸಿನಿಮಾ ಪ್ರೇಕ್ಷಕರಿಂದ ವ್ಯಾಪಕ ಪ್ರಶಂಸೆಗೆ ಒಳಪಟ್ಟಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡಿನಲ್ಲಿ ತೆರೆ ಕಂಡಿರುವ ಸಿನಿಮಾಕ್ಕೆ ಈಗ ಮುಂಬೈ, ಬೆಂಗಳೂರಿನಲ್ಲಿ ಸಿನಿಮಾ ಬಿಡುಗಡೆಗೆ ಬೇಡಿಕೆ ಬಂದಿದೆ.

ಅದೇ ರೀತಿ ಇಸ್ರೇಲ್, ದುಬಾಯಿ ಮೊದಲಾದ ಗಲ್ಫ್ ದೇಶಗಳಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ನಡೆದಿದೆ.

 ಹಾಸ್ಯ ಮತ್ತು ಉತ್ತಮ ಕತೆಯನ್ನು ಒಳಗೊಂಡ ಸಿನಿಮಾದಲ್ಲಿ ಸಿನಿಮಾ  ನಿರ್ದೇಶಕರ ಬದುಕಿನ ಚಿತ್ರಣವನ್ನೂ ತೆರೆದಿಡಲಾಗಿದೆ‌. 

“ಅನರ್ ಕಲಿ” ಸಿನಿಮಾ ಒಂದೇ ಹಂತದಲ್ಲಿ 18 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಪೊಳಲಿ, ಕಟೀಲು, ಸೋಮೇಶ್ವರ, ಉಳ್ಳಾಲ, ಉಳಿಯ, ನೀರುಮಾರ್ಗ, ಹಾಗೂ ಕಳಸದಲ್ಲಿ ಸಿನಿಮಾಕ್ಕೆ ಚಿತ್ರೀಕರಣ ನಡೆದಿದೆ.

   ಮುಖ್ಯವಾಗಿ ಸಿನಿಮಾದಲ್ಲಿ ಒಂದು ಕಥಾ ಹಂದರವನ್ನು ಇಟ್ಟುಕೊಂಡು ಸಂಪೂರ್ಣ ಹಾಸ್ಯಭರಿತವಾಗಿ ಸಿನಿಮಾ ಸಾಗಿದೆ. 

 ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ದೀಪಕ್ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್ ಬೊಳ್ಳೂರು, ಸುಜಾತ ಶಕ್ತಿನಗರ, ನಮಿತಾ ಕುಳೂರು ಮುಖ್ಯ ಭೂಮಿಕೆಯಲ್ಲಿದ್ದಾರೆ.

ನಾಯಕ  ನಟನಾಗಿ ವಿಜಯ್ ಶೋಭರಾಜ್ ಪಾವೂರು, ನಾಯಕಿಯಾಗಿ ಮಧುರ ಆರ್ ಜೆ ಉತ್ತಮವಾಗಿ  ಅಭಿನಯಿಸಿದ್ದಾರೆ. ಇನ್ನುಳಿದಂತೆ ಮೋಹನ್ ಕೊಪ್ಪಲ, ಹರ್ಷಿತ್ ಸೋಮೇಶ್ವರ, ಮಂಜು ರೈ ಮುಳೂರು, ರಂಜನ್ ಬೋಳೂರು, ಶರಣ್ ಕೈಕಂಬ, ಪ್ರಕಾಶ್ ಶೆಟ್ಟಿ ಧರ್ಮನಗರ, ಮಧುರ ಆರ್.ಜೆ ವಾತ್ಸಲ್ಯ ಸಾಲಿಯಾನ್, ವಿನಾಯಕ್ ಜೆಪ್ಪು ತಾರಾಗಣದಲ್ಲಿದ್ದಾರೆ.

ಛಾಯಾಗ್ರಹಣ ಅನಿಲ್ ಕುಮಾರ್, ಅರುಣ್ ರೈ ಪುತ್ತೂರು, ಸಹಾಯಕ ಛಾಯಾಗ್ರಹಣ ಚರಣ್ ಆಚಾರ್ಯ, ಪ್ರಜ್ವಲ್ ಸುವರ್ಣ, ಸಂಗೀತ ರೋಹಿತ್ ಪೂಜಾರಿ, ಕಾರ್ಯಕಾರಿ ನಿರ್ಮಾಪಕರು ಮಹೇಶ್ ಪುತ್ತೂರು, ವೀರ ಕೇಸರಿ, ನಿರ್ಮಾಣ ನಿರ್ವಹಣೆ ವಾತ್ಸಲ್ಯ ಸಾಲಿಯಾನ್, ವರ್ಣಾಲಂಕಾರ ಚೇತನ್ ಕಲ್ಲಡ್ಕ, ಸಹಾಯಕ ವರ್ಣಾಲಂಕಾರ ಸವ್ಯರಾಜ್ ಕಲ್ಲಡ್ಕ, ಚರಣ್ ರಾಜ್ ಪಚ್ಚಿನಡ್ಕ, ಕಲಾ ನಿರ್ದೇಶನ ಭರತ್ ತುಳುವ, ಸಹ ನಿರ್ದೇಶಕರು ವೀರಕೇಸರಿ, ಭರತ್ ತುಳುವ, ವಿವೇಕ್ ಶೆಟ್ಟಿ, ಸಹಾಯಕ ನಿರ್ದೇಶಕರು ಸುದೇಶ್ ಪೂಜಾರಿ, ಮೋಕ್ಷಿತ್ ಕನಕ ಮಜಲು ಪವಿತ್ರಪ್ರಭು, ಅಮಿತ್, ಕೀರ್ತನ್ ರೈ ಸುಳ್ಯ, ವಸ್ತ್ರ ವಿನ್ಯಾಸ ಸವಿತ ಶೇಖರ್ ವಿದ್ಯಾ ಉಚ್ಚಿಲ್,  ನೃತ್ಯ ನಿರ್ದೇಶನ ಶಶಾಂಕ್ ಸುವರ್ಣ, ಸಾಹಿತ್ಯ ಸುದೇಶ್ ಪೂಜಾರಿ, ಹರ್ಷಿತ್ ಸೋಮೇಶ್ವರ, ಹಿನ್ನಲೆ ಗಾಯನ ನಕುಲ್ ಅಭಯಂಕರ್, ಅರ್ಫಾಜ್ ಉಳ್ಳಾಲ್, ಸತೀಶ್ ಪಟ್ಲ, ಸೃಜನ್ ಕುಮಾರ್ ತೋನ್ಸೆ, ರೋಹಿತ್ ಪೂಜಾರಿ, ವಾತ್ಸಲ್ಯ ಸಾಲಿಯಾನ್, ಸೌಜನ್ಯ.

 ‌ ಪ್ರಚಾರ ವಿನ್ಯಾಸ ಪವನ್ ಆಚಾರ್ಯ ಬೋಳೂರು, 

ರಚನೆ ಮತ್ತು ನಿರ್ದೇಶನ ಹರ್ಷಿತ್ ಸೋಮೇಶ್ವರ, ನಿರ್ಮಾಣ  ಲಂಚ್ ಲಾಲ್, ಲೋಬಜೆಟ್ ಪ್ರೊಡಕ್ಷನ್, ಸಹ ನಿರ್ಮಾಣ:  ಕಿಶೋರ್ ಡಿ ಶೆಟ್ಟಿ, ರಜನೀಶ್ ಕೋಟ್ಯಾನ್.

Leave a comment

Your email address will not be published. Required fields are marked *

Emedia Advt1