# Tags
#ಅಪರಾಧ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಸೆರೆ (Mangaluru CCB Police operation : Two arrested with Drugs)

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಸೆರೆ

ಮಂಗಳೂರು: ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ  ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

 ಮಂಗಳೂರು ನಗರಕ್ಕೆ ಒರಿಸ್ಸಾದಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಮಂಗಳೂರು ನಗರಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಗಾಂಜಾವನ್ನು   ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ  ಒರಿಸ್ಸಾ ರಾಜ್ಯದ ಪಿಂಡಿಕ್ಕಿ ಗ್ರಾಮದ  ಬುಲುಬಿರೊ(24) ಮತ್ತು  ಪಶ್ವಿಮ ಬಂಗಾಳದ ಮುರ್ಶಿದಾಬಾದ್ ನಿವಾಸಿ ದಿಲ್ ದಾರ್ ಆಲಿ (28)ಯವರನ್ನು ವಶಕ್ಕೆ ಪಡೆದು, ಅವರಿಂದ  2,60,000/- ರೂ. ಮೌಲ್ಯದ 8 ಕೆಜಿ 650 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 3 ಲಕ್ಷ ಎಂದು ಅಂದಾಜಿಸಲಾಗಿದೆ.

  ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಈ ಮಾದಕ ವಸ್ತು ಗಾಂಜಾ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Leave a comment

Your email address will not be published. Required fields are marked *

Emedia Advt1