ಅದಾನಿ ಸಿಎಸ್ಆರ್: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ. 16 ಲಕ್ಷ ಯೋಜನಾ ಕಾಮಗಾರಿಗಳ ಅನಾವರಣ
(Belapu) ಬೆಳಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್-ಉಡುಪಿ ಉಷ್ಣ ವಿದ್ಯುತ್ ಸ್ಥಾವರ ಸಂಸ್ಥೆಯ ಸಾಮಾಜಿಕ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸುವ ಅದಾನಿ ಫೌಂಡೇಷನ್ನ ಸಹಯೋಗದೊಂದಿಗೆ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅದಾನಿ ಸಿಎಸ್ಆರ್ನ ಯೋಜನೆಯಡಿಯಲ್ಲಿ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಸುಮಾರು ರೂ.16 ಲಕ್ಷ ವೆಚ್ಚದ 3 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಯಿತು.
ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ. 16 ಲಕ್ಷ ಅದಾನಿ ಸಿಎಸ್ಆರ್ ಅನುದಾನಡಿಯಲ್ಲಿ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಬಳಿಯಿರುವ ಜಾರಂದಾಯ ಕೆರೆಯ ಅಭಿವೃದ್ಧಿ, ಪಣಿಯೂರು ಗ್ರಾಮದಲ್ಲಿ ನಾಲಾಗೆ ತಡೆಗೋಡೆ ಹಾಗೂ ಕೊರಗ ಸಮುದಾಯದ ಶ್ರೀ ಬ್ರಹ್ಮ ಗುಡಿಯ ಆವರಣಕ್ಕೆ ಆವರಣ ಗೋಡೆಯ ಕಾಮಗಾರಿಗಳು ಪೂರ್ಣಗೊಂಡಿದ್ದು, ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷರಾದ ಕಿಶೋರ್ ಆಳ್ವ ಮತ್ತು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ಗ್ರಾಮಸ್ಥರ ಸಮ್ಮುಖ ಉದ್ಘಾಟಿಸಿದರು.
ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅದಾನಿ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಆಳ್ವ, ಅದಾನಿ ಸಂಸ್ಥೆಯು ತನ್ನ ಸಿಎಸ್ಆರ್ ಯೋಜನೆಯಡಿ ಉಡುಪಿ ಉಷ್ಣ ವಿದ್ಯುತ್ ಸ್ಥಾವರದ ನೆರೆ ಗ್ರಾಮಗಳಲ್ಲಿ ಹತ್ತುಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯದ ಅಭಿವೃದ್ಧಿ, ಗ್ರಾಮೀಣ ಕ್ರೀಡೆ, ಕಲೆ ಮತ್ತು ಸಂಸ್ಕೃತಿಗೆ ಉತ್ತೇಜನಾ ನೀಡುವ ಕೆಲಸಗಳನ್ನು ಅನುಷ್ಟಾನಗೊಳಿಸಿದೆ. ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿಯೇ ಸುಮಾರು ರೂ. ೨೩ ಕೋಟಿ ಅನುದಾನ ಅದಾನಿ ಸಂಸ್ಥೆಯು ಈ ಹಿಂದೆ ಘೋಷಿಸಿದ್ದು, ಅದರಡಿಯಲ್ಲಿ ಇಲ್ಲಿಯ ತನಕ ಸುಮಾರು ರೂ. ೧೩ ಕೋಟಿಯಷ್ಟು ಮೂಲಭೂತ ಸೌಕರ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಗ್ರಾಮಸ್ಥರ ಅನುಕೂಲಕ್ಕೆ ತೆರವು ಮಾಡಿದೆ ಎಂದರು
ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷೆ ಶೋಭಾ ಭಟ್, ತಾಲೂಕು ಪಂಚಾಯತ್ನ ಮಾಜಿ ಸದಸ್ಯರಾದ ಶೇಖಬ್ಬ, ಗ್ರಾ.ಪಂ. ಸದಸ್ಯರಾದ ಶರತ್ ಕುಮಾರ್, ಪ್ರಕಾಶ್ ಭಟ್, ಅನಿತಾ, ಸೌಮ್ಯ, ಉಷಾ, ಸುಲೈಮಾನ್ ಮತ್ತು ಗ್ರಾಮದ ಸ್ಥಳೀಯರಾದ ನಾರಾಯಣ ಪೂಜಾರಿ, ಕೃಷ್ಣ ಶೆಟ್ಟಿ, ಲೋಕೇಶ್ ಶೆಟ್ಟಿ, ಗಣೇಶ ಶೆಟ್ಟಿ, ಯೋಗೇಶ್ ಪೂಜಾರಿ, ಉಮೇಶ ಪೂಜಾರಿ, ಸುಭಾಷ್ ಶೆಟ್ಟಿ, ಪ್ರಕಾಶ್ ಅಂಚನ್, ರಮಾನಂದ, ಪ್ರದೀಪ್ ಶೆಟ್ಟಿ, ಉಮೇಶ ಕೊರಗ, ಸುಧಾಕರ್, ತಿಮ್ಮ, ಭರತ್, ಕುಮಾರ, ಶಿವಾನಂದ, ಗುತ್ತಿಗೆದಾರರಾದ ಪ್ರಜ್ವಲ್ ಶೆಟ್ಟಿ, ಅದಾನಿ ಸಂಸ್ಥೆಯ ಏಜಿಎಂ ರವಿ ಆರ್. ಜೇರೆ, ಅದಾನಿ ಫೌಂಡೇಷನ್ನ ಅನುದೀಪ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

