ಉಡುಪಿಯಲ್ಲಿ ನ. 10ರಂದು ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ
(Udupi) ಉಡುಪಿ ನ. 8 : ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯುವ ವಾಯ್ಸ್ ಆಪ್ ಚಾಣಕ್ಯ 2024 ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ ಸೀಸನ್ 7ರ ಆಯ್ಕೆ ಪ್ರಕ್ರಿಯೆಯು ನೈಸ್ ಕಂಪ್ಯೂಟರ್ ಎಜುಕೇಷನ್ ಉಡುಪಿ ಇವರ ಸಹಯೋಗದೊಂದಿಗೆ ನ. 10ರಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 12.30ರ ತನಕ ಉಡುಪಿ ಪಿಪಿಸಿ ಬಸ್ ಸ್ಟ್ಯಾಂಡ್ ಎದುರಿನ ಸಿಮಾಜ್ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿರುವ ನೈಸ್ ಕಂಪ್ಯೂಟರ್ ಸೆಂಟರ್ ನಲ್ಲಿ ನಡೆಯಲಿದೆ.
ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದ್ದು, ಅಡಿಷನ್ನಲ್ಲಿ ಭಾಗವಹಿಸುವವರು 9900408545 ನಂಬರ್ ಗೆ ಹೆಸರನ್ನು ನೋಂದಾಯಿಸುವಂತೆ ಪ್ರಕಟಣೆ ತಿಳಿಸಿದೆ.

