ಸೋಮೇಶ್ವರ, ಉಚ್ಚಿಲ : ಸ್ವಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಮೂವರು ಯುವತಿಯರ ಧಾರುಣ ಸಾವು
(Someshwara, Uchila) ಉಚ್ಚಿಲ : ಖಾಸಗಿ ರೆಸಾರ್ಟ್ವೊಂದರ ಸ್ವಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಮೃತರನ್ನು ಕೀರ್ತನಾ ಎನ್ (21) ಪಾರ್ವತಿ ಎಸ್ (20), ಹಾಗೂ ನಿಶಿತಾ ಎಂ.ಡಿ.(21) ಎಂದು ಗುರುತಿಸಲಾಗಿದೆ.
ಈ ಮೂವರೂ ಮೈಸೂರು ಮೂಲದವರೆಂದು ಪೊಲೀಸರು ತಿಳಿಸಿದ್ದಾರೆ. ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ.
ಮೈಸೂರಿನ ಈ ಮೂವರು ಯುವತಿಯರು ಶನಿವಾರ ರೆಸಾರ್ಟ್ ಗೆ ಆಗಮಿಸಿದ್ದರು. ಭಾನುವಾರ ಬೆಳಿಗ್ಗೆ ರೆಸಾರ್ಟ್ ಮುಂಭಾಗದಲ್ಲಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿದ್ದು, ತನಿಖೆ ಮುಂದುವರೆದಿದೆ.

