• Home  
  • ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​(Love of Kannda language should be everyone : Janardhan Kodavuru)
- ಶಾಲಾ ಕಾಲೇಜು

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​(Love of Kannda language should be everyone : Janardhan Kodavuru)

Share: ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​ ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ತಿಳಿಸಿದರು.  ಅವರು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ  ಸಂಭ್ರಮಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಕಾಲೇಜಿನ […]

ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು: ಜನಾರ್ದನ್ ಕೊಡವೂರು ​

ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ತಿಳಿಸಿದರು.

 ಅವರು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ  ಸಂಭ್ರಮಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ಅವರು, ಕನ್ನಡ ಭಾಷೆ​, ನಾಡು , ನುಡಿಯ ಬಗ್ಗೆ ಚಿಂತನೆ ​ನಡೆಸಿದರು.​

 ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕವನ ಹಾಗೂ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

 ಕಾರ್ಯಕ್ರಮದ ಸಂಯೋಜಕಿ ಕನ್ನಡ ವಿಭಾಗದ ಕುಮಾರಿ ದೀಪಿಕಾ ಉಪಸ್ಥಿತರಿದ್ದರು.​

  ಭೂಮಿಕ ಸ್ವಾಗತಿಸಿದರು. ಶ್ರೀಕರ ಕಾರ್ಯಕ್ರಮ ನಿರೂಪಿಸಿದರು. ದಿಶಾ ರಾವ್ ಅತಿಥಿಗಳನ್ನು ಪರಿಚಯಿಸಿದರು. ಮಾಧುರ್ಯ ವಂದನಾರ್ಪಣೆಗೈದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.