ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ವಿಜಯೋತ್ಸವ
(Kaup) ಕಾಪು: ಹೈವೋಲ್ವೇಜ್ ಕ್ಷೇತ್ರವಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವಿನ ಪ್ರಯುಕ್ತ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನೇತಾರರಾದ ಮಲ್ಲಿಕಾರ್ಜುನ ಖರ್ಗೆ ಸಹಿತ ಸರಕರಾದ ಮೇಲೆ ಬಿಜೆಪಿಗರು ಸಾಕಷ್ಟು ಅಪಾದನೆ ಮಾಡಿದ್ದಾರೆ. ಎಲ್ಲಾ ಅಪಾದನೆಗಳಿಗೆ ಜನರು ಅಂತಿಮ ತೀರ್ಮಾನ ನೀಡಿದ್ದಾರೆ.
ಕರ್ನಾಟಕದ ಮೂರೂ ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಜನರು ಸಂಪೂರ್ಣ ಆಶಿರ್ವಾದ ನೀಡಿ, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ ಎಂದರು.
ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ನವೀನ್ ಎನ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಅಶ್ವಿನಿ, ಶೇಖರ ಹೆಜಮಾಡಿ, ಶಿವಾಜಿ ಸುವರ್ಣ, ದೀಪಕ್ ಕುಮಾರ್ ಎರ್ಮಾಳು, ಅಬ್ದುಲ್ ಹಮೀದ್, ಸುಧೀರ್ ಹೆಜಮಾಡಿ, ಅಮೀರ್ ಮೊಹಮ್ಮದ್, ಮನ್ಸೂರ್, ಆಸೀಫ್ ಮೂಳೂರು, ಹಮೀದ್ ಮೂಳೂರು, ಸತೀಶ್ಚಂದ್ರ, ಅಶೋಕ್ ನಾಯರಿ, ಶೋಭಾ, ರಾಧಿಕ, ರಾಜೇಶ್ ರಾವ್, ಫರ್ಝಾನ ಮತ್ತಿತರರು ಉಪಸ್ಥಿತರಿದ್ದರು.
