• Home  
  • ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು (Belthngadi : Three students drowned in the river)
- ಅಪರಾಧ

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು (Belthngadi : Three students drowned in the river)

Share: ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು (Belthangadi) ಬೆಳ್ತಂಗಡಿ:  ಹಬ್ಬಕ್ಕೆಂದು ಬಂದಿದ್ದ  ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು  ಹೋದ ವೇಳೆ ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ‌ ಬುಧವಾರ ಘಟಿಸಿದೆ. ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ವೇಣೂರು ಚರ್ಚ್ನ ವಾರ್ಷಿಕ ಹಬ್ಬಕ್ಕೆಂದು   ಬಂದಿದ್ದ ಕುಪ್ಪೆಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) ಮತ್ತು ಬಂಟ್ವಾಳ ಗ್ರಾಮದ ವಗ್ಗದ ಜೈಸನ್ […]

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು

(Belthangadi) ಬೆಳ್ತಂಗಡಿ:  ಹಬ್ಬಕ್ಕೆಂದು ಬಂದಿದ್ದ  ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು  ಹೋದ ವೇಳೆ ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ‌ ಬುಧವಾರ ಘಟಿಸಿದೆ.

ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ವೇಣೂರು ಚರ್ಚ್ನ ವಾರ್ಷಿಕ ಹಬ್ಬಕ್ಕೆಂದು   ಬಂದಿದ್ದ ಕುಪ್ಪೆಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) ಮತ್ತು ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ಬುಧವಾರ ಊಟ ಮುಗಿಸಿ ಮೂಡುಕೋಡಿ ಗ್ರಾಮದ ನಡ್ತಿಕಲ್ಲು ಬರ್ಕಜೆ ಡ್ಯಾಂ ಬಳಿಯ ಎರುಗುಂಡಿ ಬಳಿ  ಸ್ನಾನ ಮಾಡಲು ನದಿಗೆ  ಇಳಿದಿದ್ದರು.

  ನೀರಿನ ಸೆಳೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ಮೂವರ ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು ಸಂಬಂಧಿಕರ ರೋಧನ ಮುಗಿಲು ಮುಟ್ಟುವಂತಿತ್ತು.

  ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

ಮೂವರೂ ಮಂಗಳೂರಿನ ನರ್ಸಿಂಗ್ ಕಲಿಯುತ್ತಿರುವ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.