• Home  
  • ಉಡುಪಿ – ಉದ್ಯಾವರದಲ್ಲಿ‌ ಯುವಕ‌ ಆತ್ಮಹತ್ಯೆ
- ಅಪರಾಧ

ಉಡುಪಿ – ಉದ್ಯಾವರದಲ್ಲಿ‌ ಯುವಕ‌ ಆತ್ಮಹತ್ಯೆ

Share: ಕಾಪು : ಯುವಕನೋರ್ವ ರವಿವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ಬೊಳ್ಳೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಉದ್ಯಾವರ ಬೊಳ್ಳೆ ನಿವಾಸಿ ಆದಿತ್ಯ (24) ಚಿಕ್ಕಮ್ಮನೊಂದಿಗೆ ವಾಸವಾಗಿದ್ದರು. ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಭಾಗವಹಿಸಿದ್ದರು. ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ಮುಂಜಾನೆ 4 ಗಂಟೆಯ ಸುಮಾರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ […]

ಕಾಪು : ಯುವಕನೋರ್ವ ರವಿವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ಬೊಳ್ಳೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಉದ್ಯಾವರ ಬೊಳ್ಳೆ ನಿವಾಸಿ ಆದಿತ್ಯ (24) ಚಿಕ್ಕಮ್ಮನೊಂದಿಗೆ ವಾಸವಾಗಿದ್ದರು. ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಭಾಗವಹಿಸಿದ್ದರು. ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ಮುಂಜಾನೆ 4 ಗಂಟೆಯ ಸುಮಾರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್‌ ತಂಡವನ್ನು ಕಟ್ಟಿದ್ದರು.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.