• Home  
  • ಕುಂದಾಪುರ ; ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್ –  ಚಾಲಕ ನಾಪತ್ತೆ (Kundapura : Jet ski boat capsized off Thrasi beach – Rider missing)
- ಅಪಘಾತ

ಕುಂದಾಪುರ ; ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್ –  ಚಾಲಕ ನಾಪತ್ತೆ (Kundapura : Jet ski boat capsized off Thrasi beach – Rider missing)

Share: ಕುಂದಾಪುರ ; ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್ –  ಚಾಲಕ ನಾಪತ್ತೆ  (Kundapura) ಕುಂದಾಪುರ: ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ಚಾಲಕ ನಾಪತ್ತೆಯಾದ ಘಟನೆ ಡಿ. 21 ರಂದು ಶನಿವಾರ ಸಂಜೆ ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾದ ಚಾಲಕ ರವಿದಾಸ್ (45) ಎಂದು ಗುರುತಿಸಲಾಗಿದೆ. ಪ್ರವಾಸಿಗನನ್ನು ರಕ್ಷಿಸಲಾಗಿದೆ.  ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ […]

ಕುಂದಾಪುರ ; ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್ –  ಚಾಲಕ ನಾಪತ್ತೆ

 (Kundapura) ಕುಂದಾಪುರ: ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ಚಾಲಕ ನಾಪತ್ತೆಯಾದ ಘಟನೆ ಡಿ. 21 ರಂದು ಶನಿವಾರ ಸಂಜೆ ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ.

ನಾಪತ್ತೆಯಾದ ಚಾಲಕ ರವಿದಾಸ್ (45) ಎಂದು ಗುರುತಿಸಲಾಗಿದೆ. ಪ್ರವಾಸಿಗನನ್ನು ರಕ್ಷಿಸಲಾಗಿದೆ.

 ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗರನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು.

ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಿ ಕರೆತರಲಾಗಿದೆ. ರೈಡ್ ಮಾಡುತ್ತಿದ್ದ ರವಿದಾಸ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.

 ಮುರ್ಡೇಶ್ವರ ನಿವಾಸಿಯಾದ ರವಿದಾಸ್ ಕುಟುಂಬದೊಂದಿಗೆ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ಸ್‌ಸ್ಕೀ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು.

ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.