ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
(Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ‘ಅಪರಾಧ ತಡೆ ಮಾಸಾಚರಣೆ’ ಅಂಗವಾಗಿ ಕಾಪು ಪೋಲೀಸ್ ಠಾಣೆಯ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕಾಪು ಠಾಣಾಧಿಕಾರಿ ತೇಜಸ್ವಿ ಯವರು ಭಾಗವಹಿಸಿದ್ದರು.
ಈ ಸಂದರ್ಭ ಅವರು ಮಾತನಾಡಿ, ಪ್ರಸ್ತುತ ಸಮಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಸಮರ್ಪಕ ಮಾಹಿತಿಗಳನ್ನು ನೀಡಿದ ಅವರು, ಹದಿಹರೆಯದಲ್ಲಿ ವಿದ್ಯಾರ್ಥಿಗಳು ಕುತೂಹಲಭರಿತರಾಗಿ, ಹಾಗೂ ಕಾನೂನುಗಳ ಬಗ್ಗೆ ಅರಿವು ಮತ್ತು ಮಾರ್ಗದರ್ಶನವಿಲ್ಲದೆ ವಿಭಿನ್ನ ಪ್ರಕಾರದ ತಪ್ಪೆಸಗುತ್ತಾರೆ. ಇದರಿಂದಾಗಿ ಹೆತ್ತವರು ಶಿಕ್ಷೆಗೊಳಗಾಗುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಸೆಳತಕ್ಕೆ ಬಲಿಯಾಗದೆ ತಮ್ಮ ಶೈಕ್ಷಣಿಕ ಬದುಕನ್ನು ಸುಂದರಗೊಳಿಸಿ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಕಾರಣರಾಗ ಬೇಕೆಂಬ ಸಂದೇಶ ನೀಡಿದರು.
ಕಾಲೇಜು ಪ್ರಾಂಶುಪಾಲ ನೀಲಾನಂದ ನಾಯ್ಕ್ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಶೆಟ್ಟಿ ವಂದಿಸಿದರು.

