• Home  
  • ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Senior IAS officer Ponnuraju visits Kaup Sri Hosa Marigudi)
- ಧಾರ್ಮಿಕ

ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Senior IAS officer Ponnuraju visits Kaup Sri Hosa Marigudi)

Share: ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Kaup) ಕಾಪು: ಹಿರಿಯ ಐಎಎಸ್ ಅಧಿಕಾರಿ, ಮನಿಲಾ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನ ಸಲಹೆಗಾರ ಪೊನ್ನುರಾಜು ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.  ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಅವರು ಮಾರಿಯಮ್ಮ ದೇವಿಯ ಪ್ರಸಾದ ನೀಡಿ, ಗೌರವಿಸಿದರು‌. ಬಳಿಕ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.  ಪೊನ್ನುರಾಜು ಅವರು ಮಾತನಾಡಿ, ಕಾಪು ಮಾರಿಯಮ್ಮ […]

ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ

(Kaup) ಕಾಪು: ಹಿರಿಯ ಐಎಎಸ್ ಅಧಿಕಾರಿ, ಮನಿಲಾ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನ ಸಲಹೆಗಾರ ಪೊನ್ನುರಾಜು ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.

 ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಅವರು ಮಾರಿಯಮ್ಮ ದೇವಿಯ ಪ್ರಸಾದ ನೀಡಿ, ಗೌರವಿಸಿದರು‌. ಬಳಿಕ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

 ಪೊನ್ನುರಾಜು ಅವರು ಮಾತನಾಡಿ, ಕಾಪು ಮಾರಿಯಮ್ಮ ದೇವಸ್ಥಾನದ ಚಿತ್ರಣವೇ ಬದಲಾಗಿದೆ. ಭಕ್ತರೆಲ್ಲರ ಸಹಕಾರದೊಂದಿಗೆ ಸಂಪೂರ್ಣ ಶಿಲಾಮಯವಾಗಿ, ಅತ್ಯದ್ಭುತವಾಗಿ ನಿರ್ಮಾಣಗೊಂಡಿರುವ ಮಾರಿಗುಡಿಯು ಜಗದಗಲದ ಭಕ್ತರ ಶ್ರದ್ಧಾಕೇಂದ್ರವಾಗಿ ಮೂಡಿ ಬರುವಂತಾಗಲಿ ಎಂದು ಶುಭ ಹಾರೈಸಿದರು.

 ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯ ನಿರ್ವಹಣಾಧಿಕಾರಿ ರವಿಕಿರಣ್ ಕೆ., ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮನೋಹರ ಶೆಟ್ಟಿ ಕಾಪು, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಜಯಲಕ್ಷ್ಮಿ ಶೆಟ್ಟಿ, ಚರಿತಾ ಶಶಿಧರ ದೇವಾಡಿಗ, ನವದುರ್ಗಾ ಲೇಖನ ಸಮಿತಿ ಮಹಿಳಾ ಸಂಚಾಲಕಿ ಗೀತಾಂಜಲಿ ಸುವರ್ಣ, ಸ್ವರ್ಣ ಸಮರ್ಪಣಾ ಸಮಿತಿ ಕಚೇರಿ ಸಂಚಾಲಕ ಜಯರಾಮ ಆಚಾರ್ಯ, ರಘುರಾಮ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ದನ್ ಕಾಪು ಮೊದಲಾದವರು ಉಪಸ್ಥಿತರಿದ್ದರು. ‌

Leave a comment

Your email address will not be published. Required fields are marked *

eMedia Kannada  @2025. All Rights Reserved.