ಹೆಜಮಾಡಿ : ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯಿಂದ 3 ತಿಂಗಳ ಉಚಿತ ಟ್ಯೂಶನ್ ತರಬೇತಿ
(Hejamdi) ಹೆಜಮಾಡಿ: ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿಗಳಿಗೆ 3 ತಿಂಗಳ ಉಚಿತ ಟ್ಯೂಶನ್ ತರಬೇತಿ ಉದ್ಘಾಟನೆಗೊಂಡಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿರವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸಂಪಾವತಿ ಮಾತನಾಡಿ, ನಮ್ಮ ಶಾಲಾ ಮಕ್ಕಳು ಉತ್ತಮ ಫಲಿತಾಂಶ ಬರುವಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರ ಸಿಕ್ಕಿದೆ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪಡುಬಿದ್ರಿ ವಲಯದ ಮೇಲ್ವಿಚಾರಕರಾದ ಸರಿತಾ ಹಾಗೂ ಸೇವಾ ಪ್ರತಿನಿಧಿ ಹಾಜಿರ ಉಪಸ್ಥಿತರಿದ್ದರು.

