• Home  
  • ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ (Udupi District Nayak Community Association General Assembly)
- ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ (Udupi District Nayak Community Association General Assembly)

Share: ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ (Udupi) ಉಡುಪಿ: ಕಲ್ಯಾಣಪುರದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ಉಡುಪಿ ಜಿಲ್ಲಾ  ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು. ಮಹಾಸಭೆಯನ್ನು ಉಡುಪಿ ಸರಕಾರಿ ಜಿಲ್ಲಾ ಆಸ್ಫತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ. ದಯಾಮಣಿ ಬಿ ಯವರು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ನ್ನು ದೂರವಿಟ್ಟು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಮೂಲಕ ಜ್ಞಾನ ಸಂಪಾದಿಸಿ, […]

ಉಡುಪಿ ಜಿಲ್ಲಾ ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ

(Udupi) ಉಡುಪಿ: ಕಲ್ಯಾಣಪುರದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ಉಡುಪಿ ಜಿಲ್ಲಾ  ನಾಯಕ ಸಮುದಾಯ ಸಂಘದ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿತು.

ಮಹಾಸಭೆಯನ್ನು ಉಡುಪಿ ಸರಕಾರಿ ಜಿಲ್ಲಾ ಆಸ್ಫತ್ರೆಯ ಹಿರಿಯ ವೈದ್ಯಕೀಯ ತಜ್ಞರಾದ ಡಾ. ದಯಾಮಣಿ ಬಿ ಯವರು ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ನ್ನು ದೂರವಿಟ್ಟು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಮೂಲಕ ಜ್ಞಾನ ಸಂಪಾದಿಸಿ, ಉನ್ನತ ವ್ಯಾಸಂಗ ಮಾಡಿ ಉತ್ತಮ ನೌಕರಿಯನ್ನು ಆಯ್ಕೆ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ, ಬದುಕನ್ನು ಸಾರ್ಥಕಗೊಳಿಸಬೇಕೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 

 ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಸಮುದಾಯ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯಕ ವಹಿಸಿದ್ದರು.

ಅವರು ಮಾತನಾಡಿ, ನಮ್ಮ ಸಮುದಾಯವು ಒಗ್ಗಟ್ಟಿನಿಂದ ಇದ್ದು ಮುಂದೆ ಯಾವುದೇ ಸಮಸ್ಯೆ ಎದುರಾದರೂ ಒಗ್ಗಟ್ಟಿನಲ್ಲಿರಬೇಕು. ನಾವೆಲ್ಲ ಒಂದಾಗಿ   ಸಮಸ್ಯೆಗಳನ್ನು ಪರಿಹರಿಸಿಕೊಂಡು ಸರಕಾರದಿಂದ ನಮ್ಮ ಸಮುದಾಯಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಬೇಕು ಎಂದರು.

  ಮುಖ್ಯ ಅತಿಥಿಗಳಾದ ಕಾರ್ಕಳ ನಗರ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಯಶವಂತ, ಜಿಲ್ಲಾ ನಾಯಕ ಸಮುದಾಯ ಸಂಘದ ಗೌರವ ಅಧ್ಯಕ್ಷರಾದ  ಶೇಖರ್ ನಾಯಕ, ಕಾಪು ತಾಲೂಕು ನಾಯಕ ಸಮುದಾಯದ ಅಧ್ಯಕ್ಷರಾದ ನೀಲಾನಂದ ನಾಯಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

  ವೇದಿಕೆಯಲ್ಲಿ ಮಂಗಳೂರು ತಾಲೂಕು ಸಂಘದ ಅಧ್ಯಕ್ಷರಾದ ಹರೀಶ್ ನಾಯಕ, ಜಿಲ್ಲಾ ಸಂಘದ ಗೌರವ ಸಲಹೆಗಾರರಾದ ವಸಂತ ನಾಯಕ, ಕೋಶಾಧಿಕಾರಿ ಮಂಜುನಾಥ ನಾಯಕ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳನ್ನು, ನಿವೃತ್ತರನ್ನು, ಸಾಧಕರನ್ನು ಹಾಗೂ ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ 85 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

 ಜಿಲ್ಲಾ ಕಾರ್ಯದರ್ಶಿ ಸತೀಶ್ ನಾಯಕ ವರದಿ ವಾಚಿಸಿದರು.  ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರತಿಮ ಸನ್ಮಾನ ಪತ್ರ ವಾಚಿಸಿದರು.

ಮಾಹೆ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಕುಮಾರಿ ನಿಶಾ ಕಾರ್ಯಕ್ರಮ ನಿರೂಪಿಸಿದರು.

 ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ನಾಯಕ ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.