• Home  
  • ಉಚ್ಚಿಲ: ಪಾದಚಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು(Uchilla: Pedestrian hit by car dies on the spot)
- ಅಪಘಾತ

ಉಚ್ಚಿಲ: ಪಾದಚಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು(Uchilla: Pedestrian hit by car dies on the spot)

Share: ಉಚ್ಚಿಲ: ಪಾದಚಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು (Uchila) ಉಚ್ಚಿಲ: ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ರಸ್ತೆ ದಾಟುತ್ತಿದ್ದ ವಯೋವೃದ್ಧರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಯೇ ಧಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.  ಮೃತ ವ್ಯಕ್ತಿಯನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72)ಎಂದು ಗುರುತಿಸಲಾಗಿದೆ. ಅವರು ಪಶ್ಚಿಮ ಬದಿಯಿಂದ ಪೂರ್ವ ಬದಿಗೆ ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. […]

ಉಚ್ಚಿಲ: ಪಾದಚಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು

(Uchila) ಉಚ್ಚಿಲ: ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ರಸ್ತೆ ದಾಟುತ್ತಿದ್ದ ವಯೋವೃದ್ಧರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಯೇ ಧಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

 ಮೃತ ವ್ಯಕ್ತಿಯನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72)ಎಂದು ಗುರುತಿಸಲಾಗಿದೆ.

ಅವರು ಪಶ್ಚಿಮ ಬದಿಯಿಂದ ಪೂರ್ವ ಬದಿಗೆ ರಸ್ತೆ ದಾಟುತ್ತಿದ್ದ ಸಂದರ್ಭ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಉಚ್ಚಿಲ ಎಸ್ ಡಿಪಿ ಐ ಅಂಬುಲೆನ್ಸ್‌ನಲ್ಲಿ ಅವರ ಮೃತ ದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.  ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಹೆದ್ದಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ ;  ಉಚ್ಚಿಲ ರಾಹೆ ೬೬ ರಲ್ಲಿ ವೇಗ ನಿಯಂತ್ರಣಕ್ಕಾಗಿ ಎಲ್ಲಿಯೂ ಬ್ಯಾರಿಕೇಡ್‌ ಅಳಡಿಸಿಲ್ಲ. ರಾತ್ರಿ ಹೆದ್ದಾರಿಯಲ್ಲಿ ವಿದ್ಯುತ್‌ ದೀಪ ಇಲ್ಲದೆ ಕತ್ತಲೆ ಆವರಿಸಿದೆ. ಹೆದ್ದಾರಿಯಲ್ಲಿ ಬ್ಲಿಂಕರನ್ನೂ ಆಳವಡಿಸಿಲ್ಲ. ಈ ಬಗ್ಗೆ ಉಚ್ಚಿಲ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಹೆದ್ದಾರಿ ಗುತ್ತಿಗೆದಾರ ಕೆಕೆಆರ್ ಸಂಸ್ಥೆ ಉಚ್ಚಿಲ ಗ್ರಾಮದ ಬಗ್ಗೆ ಅಸಡ್ಡೆ ತೋರಿದಲ್ಲಿ ಜನತೆ ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.