ಕಾಪು: ದಂಡತೀರ್ಥ ಕಾಲೇಜು : ಸಂಸ್ಥಾಪಕರ ಪುಣ್ಯತಿಥಿ ಆಚರಣೆ
(Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ದಿ. ಡಾ. ಕೆ. ಪ್ರಭಾಕರ ಶೆಟ್ಟಿಯವರ ಪುಣ್ಯತಿಥಿಯನ್ನು ಕಾಲೇಜಿನಲ್ಲಿ ಆಚರಿಸಲಾಯಿತು.
ಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ಸಂಸ್ಥಾಪಕರ ಪುತ್ಥಳಿಗೆ ಮಾಲಾರ್ಪಣೆಗೈದರು.
ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ರವರು ನುಡಿ ನಮನ ಸಲ್ಲಿಸಿ, ಸಂಸ್ಥಾಪಕ ಡಾ. ಪ್ರಭಾಕರ ಶೆಟ್ಟಿಯವರು ಕಾಪುವಿನ ಹಿರಿಯ ವೈದ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದವರು. ಶೈಕ್ಷಣಿಕವಾಗಿ ಪರಿಸರದ ಜನರಿಗೆ ವಿಜ್ಞಾನ ವಿಭಾಗದ ಪದವಿ ಪೂರ್ವ ಕಾಲೇಜನ್ನು ಸ್ಥಾಪಿಸಿ, ಬಳಿಕ ಕಲಾ ಮತ್ತು ವಾಣಿಜ್ಯ ವಿಭಾಗವನ್ನಾಗಿ ಪರಿವರ್ತಿಸಿದರು.
ಪ್ರತೀ ವರ್ಷ ಆರು ಲಕ್ಷ ರೂ. ವಿದ್ಯಾರ್ಥಿವೇತನವನ್ನು ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಿದ್ದಲ್ಲದೆ, ಈ ವಿದ್ಯಾ ಸಂಸ್ಥೆಯು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗುವಂತೆ ಮಾಡಿದವರು. ಅವರ ಆದರ್ಶ ನಮಗೆಲ್ಲ ದಾರಿದೀಪವಾಗಬೇಕು. ಅವರು ಕಟ್ಟಿ ಬೆಳೆಸಿದ ಈ ವಿದ್ಯಾಸಂಸ್ಥೆಯ ಪ್ರಗತಿಗೆ ನಾವೆಲ್ಲ ನಿರಂತರವಾಗಿ ತೊಡಗಿಸಿಕೊಳ್ಳಬೇಕೆಂಬ ಸಂದೇಶ ನೀಡಿದರು.
ಸಮಾರಂಭದಲ್ಲಿ ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

