ಕಾರ್ಕಳ ಮುಂಡ್ಕೂರು: ಕಾರು ಪಲ್ಟಿ, ಮೂವರಿಗೆ ಗಾಯ, ಓರ್ವ ಗಂಭೀರ
(Karkala) ಕಾರ್ಕಳ: ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 5 ಗಂಟೆಗೆ ಸಂಭವಿಸಿದೆ.
ಶಿವಮೊಗ್ಗದಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಕೆಎ 12 ಎಂ ಸಿ ಒ 180 ನಂಬರಿನ ಟೊಯೊಟಾ ಅರ್ಬನ್ ಕ್ರೂಷಿಯರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆಗೋಡೆಗೆ ಅಪ್ಪಳಿಸಿ ಪಲ್ಟಿಯಾಗಿದೆ.
ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು, ಮೂವರಿಗೂ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.
ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಹೋಗುತ್ತಿದ್ದ ಯಾತ್ರಿಕರು ಕೂಡಲೇ ಸಮಾಜ ಸೇವಕ ಸುಪ್ರೀತ್ ಶೆಟ್ಟಿಯವರಿಗೆ ದೂರವಾಣಿ ಕರೆ ಮಾಡಿದ್ದು, ಅವರು ಅಂಬುಲೆನ್ಸ್ ನೊಂದಿಗೆ ತಕ್ಷಣ ಆಗಮಿಸಿ ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ದೃಶ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

