ಕಾಪು: ಮಜೂರಿನಲ್ಲಿ ಕಾಪು ಬಿಜೆಪಿಯಿಂದ “ನಮ್ಮ ಸಂವಿಧಾನ ನಮ್ಮ ಹೆಮ್ಮೆ” ಕಾರ್ಯಕ್ರಮ
(Kaup) ಕಾಪು: ಕಾಪುವಿನ ಮಜೂರು ಆರ್ ಕೆ ಸಭಾಂಗಣದಲ್ಲಿ ಭಾನುವಾರ ಸಂಜೆ ಕಾಪು ಮಂಡಲ ಬಿಜೆಪಿಯಿಂದ “ನಮ್ಮ ಸಂವಿಧಾನ ನಮ್ಮ ಹೆಮ್ಮೆ” ಕಾರ್ಯಕ್ರಮ ಜರಗಿತು.
ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿಯವರು ಸಂವಿದಾನ ಶಿಲ್ಪಿ ಡಾ, ಬಿಆರ್ ಅಂಬೇಡ್ಕರ್ ಛಾಯಾ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅವರು ಈ ಸಂದರ್ಭ ಮಾತನಾಡಿ, ಈಗಾಗಲೇ 106 ಬಾರಿ ಸಂವಿಧಾನದ ತಿದ್ದುಪಡಿ ಆಗಿದೆ. ಕಾಂಗ್ರೆಸ್ ಅವಧಿಯಲ್ಲಿ 75 ಬಾರಿ, ಬಿಜೆಪಿ ಅವಧಿಯಲ್ಲಿ 31 ಬಾರಿ ಆಗಿದೆ. ಕಾಂಗ್ರೆಸ್ ನ ತಿದ್ದುಪಡಿ ಆವರ ಸ್ವಾರ್ಥಕ್ಕೆ ಆಗಿದೆ ಎಂದುಛಲವಾದಿ ನಾರಾಯಣ ಸ್ವಾಮಿ ಹೇಳಿದರು.
ಇತ್ತೀಚೆಗೆ ಗೃಹ ಮಂತ್ರಿ ಅಮಿತ್ ಷಾರವರು ಕಾಂಗ್ರೆಸ್ಸಿಗರಿಗೆ ಸಂವಿದಾನದ ಬಗ್ಗೆ ಕಿವಿ ಮಾತು ಹೇಳಿದಾಗ, ಅದನ್ನೇ ಓಟ್‌ಬ್ಯಾಂಕ್ ರಾಜಕಾರಣವನ್ನಾಗಿ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸಿಗರು ಅಂದಿನಿಂದ ಸಂವಿಧಾನದ ಪುಸ್ತಕವನ್ನು ಹಿಡಿದು ಅನ್ಯಾಯ ಆಗಿದೆ ಎಂದು ಬೊಬ್ಬಿಡುತ್ತಿದ್ದಾರೆ. ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ಸಂವಿಧಾನಕ್ಕೆ ಅನ್ಯಾಯ ಆಗಿದ್ದು, ಬಿಜೆಪಿಯಿಂದ ಆಗಿಲ್ಲ ಎಂದೂ ನಾರಾಯಣ ಸ್ವಾಮಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಮತ್ತು ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶರಣ್ ಕುಮಾರ್ ಮಟ್ಟು ನಿರೂಪಿಸಿ, ವಂದಿಸಿದರು.

