ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಸೋಮವಾರ (ಜ. 27) ಚಪ್ಪರ ಮೂಹೂರ್ತ
(Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಬಾವಿಯಾಗಿ ಜನವರಿ 27ರ ಸೋಮವಾರ ಬೆಳಿಗ್ಗೆ ಗಂಟೆ 9:09ಕ್ಕೆ ಸರಿಯಾಗಿ ಚಪ್ಪರ ಮೂಹೂರ್ತ ನಡೆಯಲಿದೆ.
ಕಾಪು ಮಾರಿಯಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗಿಯಾಗಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.

