• Home  
  • ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ.
- ಶಾಲಾ ಕಾಲೇಜು - ಸಂಘ, ಸಂಸ್ಥೆಗಳು

ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ.

Share:  ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ. (Dharmasthala) ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ಆಯೋಜಿಸಿದ ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ  ವಿದ್ಯಾರ್ಥಿನಿ ಭೂಮಿಕಾ ರಾವ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.  ಪ್ರಬಂಧ ಸ್ಪರ್ಧೆಯಲ್ಲಿ ಪಡುಬಿದ್ರಿ […]

 ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಬಹುಮಾನ.

(Dharmasthala) ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ಆಯೋಜಿಸಿದ ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ  ವಿದ್ಯಾರ್ಥಿನಿ ಭೂಮಿಕಾ ರಾವ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

 ಪ್ರಬಂಧ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮನ್ವಿತಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

  ಧರ್ಮಸ್ಥಳದಲ್ಲಿ ನಡೆದ ಪುರಸ್ಕಾರ ಸಮಾರಂಭದಲ್ಲಿ ಈ ಇಬ್ಬರು ವಿದ್ಯಾರ್ಥಿನಿಯರು ಡಾ. ಡಿ. ವೀರೇಂದ್ರ ಹೆಗ್ಗಡೆ,   ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ರಾಮಕೃಷ್ಣ ಮಠ, ಸಂಗೀತ ನಿರ್ದೇಶಕ ವಿ. ಮನೋಹರ್ ಮೊದಲಾದ ಗಣ್ಯರ ಸಮ್ಮುಖದಲ್ಲಿ ಪುರಸ್ಕಾರವನ್ನು ಪಡೆದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.