ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Second Level Examination in Kaup Dandatirtha education institute)
ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ
(Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ದ್ವಿತೀಯ ಸೋಪಾನ ಪರೀಕ್ಷೆಯು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆಯಿತು.
ಭಾರತ್ ಸ್ಕೌಟ್ಸ್-ಗೈಡ್ಸ್ ಉಡುಪಿ ಜಿಲ್ಲಾ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು.
ಅವರು ಮಾತನಾಡಿ, ಸ್ಕೌಟ್ ಚಳವಳಿಯು ಒಂದು ನಿರಂತರ ಪ್ರಕ್ರಿಯೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇವುಗಳಲ್ಲಿ ತೊಡಗಿಕೊಂಡಾಗ, ಸಾಮಾಜಿಕ ಜೀವನದಲ್ಲಿ ಪರಿಪೂರ್ಣರಾಗಿ ಮೂಡಿಬರುತ್ತಾರೆ. ದೇಶಭಕ್ತಿಯ ಜೊತೆಗೆ ಸುಂದರ ಭವಿಷ್ಯದ ನಿರ್ಮಾಣಕ್ಕೆ ಕಾರಣರಾಗುತ್ತಾರೆ. ಸ್ಕೌಟ್ ಪರೀಕ್ಷೆಯ ಜೊತೆಗೆ ಮುಂಬರುವ ಶಾಲಾ ಪರೀಕ್ಷೆಗಳಲ್ಲಿಯೂ ತೇರ್ಗಡೆಯಾಗಿ ಪ್ರತಿಭಾನ್ವಿತರಾಗಿ ಮೂಡಿಬನ್ನಿ ಎಂದು ಶುಭ ಹಾರೈಸಿದರು.
ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಾಪು ಸ್ಥಳೀಯ ಸಂಸ್ಥೆಯ ಗೌರವಾಧ್ಯಕ್ಷ ಡಾ. ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿದ್ದರು.
ಅವರು ಮಾತನಾಡಿ, ವಿದ್ಯಾರ್ಥಿಗಳು ಇಂತಹ ಪರೀಕ್ಷಾ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಸ್ಕೌಟ್ಸ್-ಗೈಡ್ಸ್ ನ ಉನ್ನತ ಗೌರವ-ಪುರಸ್ಕಾರಗಳನ್ನು ಪಡೆದು ಪ್ರತಿಭಾನ್ವಿತರಾಗಿ ಮೂಡಿ ಬರುತ್ತಾರೆ ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ ಶೇಖರ್, ದಂಡತೀರ್ಥ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಜಿಲ್ಲಾ ಸಹಾಯಕ ಆಯುಕ್ತ ರಿತೇಶ್ ಶೆಟ್ಟಿ ಸೂಡ, ಉಡುಪಿ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ರಮೇಶ್ ಅಂಬಾಡಿ, ಶಿಬಿರದ ನಾಯಕರಾದ ಉಮೇಶ್ ಕಾಂಚನ್, ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್, ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನ್ಹಸ್, ಬೇರೆ ಬೇರೆ ವಿದ್ಯಾಸಂಸ್ಥೆಗಳ ಶಿಕ್ಷಕ – ಶಿಕ್ಷಕಿಯರು ಹಾಗೂ ಸುಮಾರು ೫೦೦ ಮಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಮರಿಯ ಅನಿತ ಮೆಂಡೋನ್ಸ ಸ್ವಾಗತಿಸಿದರು. ಉಡುಪಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಶಿಕ್ಷಕ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ವಂದಿಸಿದರು.