• Home  
  • ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Hosa Marigudi in Kaup: Entrance of huge bell, gate and gold ornaments, procession)
- ಧಾರ್ಮಿಕ - ರಾಜಕೀಯ

ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Hosa Marigudi in Kaup: Entrance of huge bell, gate and gold ornaments, procession)

Share: ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ (Kaup) ಕಾಪು : ಸಮಗ್ರ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ದಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ನೂತನ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ, ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಯು ಭಾನುವಾರ ದಂಡತೀರ್ಥ ಮಠದ ಎದುರು ನೆರವೇರಿತು.  ಕೃಷ್ಣಾಪುರ ಮಠದ ಶ್ರೀ ವಿದ್ಯಾಶ್ರೀ ಸಾಗರ ಸ್ವಾಮೀಜಿ ಸ್ವರ್ಣ ಗದ್ದುಗೆಯನ್ನು ಅನಾವರಣಗೊಳಿಸಿದರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಪುರಮೆರವಣಿಗೆಗೆ […]

ಕಾಪು ಹೊಸ ಮಾರಿಗುಡಿ: ಬೃಹತ್‌ ಗಂಟೆ, ಧ್ವಾರ ಮತ್ತು ಸ್ವರ್ಣಾಭರಣಗಳ ಪುರಪ್ರವೇಶ, ಶೋಭಾಯಾತ್ರೆ

(Kaup) ಕಾಪು : ಸಮಗ್ರ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ದಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ನೂತನ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ, ಸಹಿತ ಸ್ವರ್ಣಾಭರಣಗಳ ಪುರಪ್ರವೇಶ ಶೋಭಾಯಾತ್ರೆಯು ಭಾನುವಾರ ದಂಡತೀರ್ಥ ಮಠದ ಎದುರು ನೆರವೇರಿತು.

 ಕೃಷ್ಣಾಪುರ ಮಠದ ಶ್ರೀ ವಿದ್ಯಾಶ್ರೀ ಸಾಗರ ಸ್ವಾಮೀಜಿ ಸ್ವರ್ಣ ಗದ್ದುಗೆಯನ್ನು ಅನಾವರಣಗೊಳಿಸಿದರು. ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಪುರಮೆರವಣಿಗೆಗೆ ಚಾಲನೆ ನೀಡಿದರು.

ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ನೇತೃತ್ವದಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ಸ್ವರ್ಣ ಜ್ಯುವೆಲ್ಲರ್ಸ್‌ನಲ್ಲಿ ನಿರ್ಮಾಣಗೊಂಡ ಸ್ವರ್ಣ ಗದ್ದುಗೆ ಮತ್ತು ಮಾರಿಯಮ್ಮ ದೇವಿಯ ಚಿನ್ನದ ಮುಖ, ದಾನಿ ಮುಂಬಯಿಯ ಉದ್ಯಮಿ ತೋನ್ಸೆ ಆನಂದ ಎಂ. ಶೆಟ್ಟಿ ಮತ್ತು ಶಶಿರೇಖಾ ಆನಂದ ಶೆಟ್ಟಿ ಅವರು ನೀಡಿದ ಮಂಗಳೂರು ಎಸ್.ಎಲ್. ಶೇಟ್ ಜ್ಯುವೆಲ್ಲರ್ಸ್‌ನಲ್ಲಿ ನಿರ್ಮಾಣಗೊಂಡಿರುವ ರಜತ ರಥ, ಮುಂಬಯಿ ಉದ್ಯಮಿ ಅರವಿಂದ್ ಶೆಟ್ಟಿ ಮತ್ತು ಪಲ್ಲವಿ ಶೆಟ್ಟಿ ದಂಪತಿ ಸಮರ್ಪಿಸುವ ಅಯೋಧ್ಯೆ ಮಾದರಿಯ ಬೃಹತ್ ಗಂಟೆ, ಉಳಿಯಾರಗೋಳಿ ದಿ. ರಾಧಾ ಸುಂದರ ಶೆಟ್ಟಿ ಅವರ ಮಕ್ಕಳು ಹಾಗೂ ಮೂಳೂರು ಸುಧಾಕರ ಹೆಗ್ಡೆ ಮತ್ತು ರಂಜನಿ ಸುಧಾಕರ ಹೆಗ್ಡೆ ದಂಪತಿ ಸಮರ್ಪಿಸುವ ರಾಜಗೋಪುರದ ಮಹಾದ್ವಾರದ ಬಾಗಿಲು ಹಾಗೂ ಉಚ್ಚಂಗಿ ದೇವಿಯ ಚಿನ್ನದ ಪಾದಪೀಠ ಮತ್ತು ಚಿನ್ನದ ಮುಖದ ಪುರಪ್ರವೇಶ ನಡೆಯಿತು.

ಶ್ರೀ ಕ್ಷೇತ್ರ ದಂಡತೀರ್ಥ ಮಠದಿಂದ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಗಿ ಕಾಪು ಪೇಟೆಯ ಮೂಲಕ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಪುರಪ್ರವೇಶ ನಡೆಯಿತು.

ಸಾವಿರಾರು ಭಕ್ತರು ಹೆದ್ದಾರಿ ಇಕ್ಕೆಲಗಳಲ್ಲಿ ಸ್ವರ್ಣ ಗದ್ದುಗೆ, ರಜತ ರಥ, ಬೃಹತ್ ಗಂಟೆ, ಸಹಿತ ಸ್ವರ್ಣಾಭರಣಗಳ ನೋಡಲು ಕುತೂಹಲದಿಂದ  ಕಿಕ್ಕಿರಿದು ತುಂಬಿದ್ದರು.

ಶೋಭಾಯಾತ್ರೆ ಉದ್ದಕ್ಕೂ ಸಾರ್ವಜನಿಕರಿಗೆ ಸ್ವರ್ಣ ಗದ್ದುಗೆಗೆ ಪುಷ್ಪಾರ್ಚನೆಗೆ ಅವಕಾಶ ಮಾಡಿಕೊಡಲಾಯಿತು.

ಮೆರವಣಿಗೆಯಲ್ಲಿ ಕುಣಿತ ಭಜನೆ, ಕೊರಗ ಸಮುದಾಯದ ಡೋಲು ವಾದನ, ಮಕ್ಕಳಿಂದ ಜಾಗಟೆ ಮತ್ತು ಶಂಖನಾದ, ಹುಲಿ ವೇಷ, ಮರಕಾಲು ಕುಣಿತ, ಕೀಲು ಕುದುರೆ, ಯಕ್ಷಗಾನ ನೃತ್ಯ ರೂಪಕ ಸಹಿತ ವಿವಿಧ ವೇಷಗಳು  ವೇಷಗಳು ಮೆರವಣಿಗೆಯಲ್ಲಿ ರಂಗುತಂದಿತು. ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಮಾಣಿಲ ಶ್ರೀದಾಮದ ಮೋಹನದಾಸ ಸ್ವಾಮೀಜಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ರಘುಪತಿ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಪ್ರಧಾನ ತಂತ್ರಿ ಕೊರಂಗ್ರಪಾಡಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಾರ್ಯನಿರ್ವಹಣಾಧಿಕಾರಿ ಕೆ. ರವಿಕಿರಣ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಸ್ವರ್ಣ ಗದ್ದುಗೆ ಸಮರ್ಪಣ ಸಮಿತಿಯ ಅಧ್ಯಕ್ಷ ರವಿಸುಂದರ್ ಶೆಟ್ಟಿ ಸ್ವರ್ಣ ಗದ್ದುಗೆ ಸಮರ್ಪಣ ಮೆರವಣಿಗೆ ಸಮಿತಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.