# Tags
#ಧಾರ್ಮಿಕ #ವಿಡಿಯೋ

ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಸಂಸದೆ ಕಂಗನಾ ರಾಣಾವತ್‌ ಭೇಟಿ (Actress and Mandi MP Kangana Ranaut visits Kaup Sri Hosamarigudi temple)

ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಸಂಸದೆ ಕಂಗನಾ ರಾಣಾವತ್‌ ಭೇಟಿ

(Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿ ದೇಗುಲಕ್ಕೆ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಾಣಾವತ್‌ ಭೇಟಿ ನೀಡಿ ಅಮ್ಮನ ದರ್ಶನ ಪಡೆದರು.

ದೇವಳದ ತಂತ್ರಿವರ್ಯರಾದ ಕುಮಾರಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾಧ ವಿತರಿಸಿದರು.

ದೇವಳದ ವತಿಯಿಂದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಹಾಗೂ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಕಂಗನಾ ರಾಣಾವತ್‌ ಅವರನ್ನು ಸನ್ಮಾನಿಸಲಾಯಿತು.

ದೇವಳದ ಕಲಾ ಕುಸುರಿ ಕೆಲಸಕ್ಕೆ ಮನಸೋತ ಸಂಸದೆ ಕಂಗನಾ, ಇದೊಂದು ಕಲಾತ್ಮಕ ದೇಗುಲವಾಗಿದ್ದು, ಮುಂದಿನ ದಿನಗಳಲ್ಲಿ ಇದು ಖ್ಯಾತ ಪ್ರವಾಸಿ ತಾಣವಾಗಲಿದೆ ಎಂದು ಸಂತಸ ವ್ಯಕ್ತ ಪಡಿಸಿದರು.

ಈ ಸಂದರ್ಭ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ,   ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಭಗವಾನ್ ದಾಸ್ ಶೆಟ್ಟಿಗಾರ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ರಮೇಶ್‌ ಹೆಗಡೆ ಕಲ್ಯ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ಸದಾಶಿವ ಎ. ಕರ್ಕೇರಾ, ರೋಷನ್‌ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಮುಂಬಯಿ, ಗೀತಾಂಜಲಿ ಸುವರ್ಣ,  ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

Emedia Advt3