ಬಂಟಕಲ್ಇಂಜಿನಿಯರಿಂಗ್ಕಾಲೇಜಿಗೆ “Incridea -25”ರಲ್ಲಿ ಸಮಗ್ರ ಚಾಂಪಿಯನ್ಶಿಪ್ ಟ್ರೋಫಿ
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜತಾಂತ್ರಿಕ ವಿದ್ಯಾಲಯ, ಬಂಟಕಲ್ನ ಒಟ್ಟು 50 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕತಾಂತ್ರಿಕ ಮಹಾವಿದ್ಯಾಲಯ (ಎಮ್.ಎ.ಎಮ್.ಐ.ಟಿ)ದಲ್ಲಿ “Incridea -25” ಸ್ಪರ್ಧೆಯಲ್ಲಿ ಭಾಗವಹಿಸಿ ಸಮಗ್ರ ಚಾಂಪಿಯನ್ ಶಿಪ್ ಟ್ರೋಫಿಯೊಂದಿಗೆ ರೂ. 60,೦೦೦ ನಗದು ಬಹುಮಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳು ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದಾರೆ. ಜತೆಗೆ ವಿದ್ಯಾರ್ಥಿಗಳು ರ್ಯಾಂಪ್ ವಾಕ್ ಮತ್ತು ಫೋಟೊಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಅಂತಾಕ್ಷರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಪಠ್ಯೇತರ ಚಟುವಟಿಕೆಯ ಸಂಯೋಜಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

