ಉಡುಪಿ ಕರಾವಳಿ ಬೈಪಾಸ್ ಸಮೀಪ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ
(Udupi) ಉಡುಪಿ: ನಗರದ ಕರಾವಳಿ ಬೈಪಾಸ್ ಸಮೀಪದ ಖಾಲಿ ಜಾಗದಲ್ಲಿ ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.
ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಅನಾಹುತದಿಂದ ಸಮೀಪದಲ್ಲಿರುವ ಗುಜರಿ ಅಂಗಡಿ ಹಾಗೂ ಶಾರದಾ ಇಂಟರ್ನ್ಯಾಷನಲ್ ಹೋಟೆಲಿಗೆ ಯಾವುದೇ ಹಾನಿಯಾಗಿಲ್ಲ ಎಂಬ ಮಾಹಿತಿ ಲಭಿಸಿದೆ.

