• Home  
  •   ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by Ermal Srinidhi Mahila Mandal)
- ವಿಡಿಯೋ - ಸಂಘ, ಸಂಸ್ಥೆಗಳು

  ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by Ermal Srinidhi Mahila Mandal)

Share:   ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (Padubidri) ಪಡುಬಿದ್ರಿ: ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣಾ ಸಮಾರಂಭ ಶನಿವಾರ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದಲ್ಲಿ ನೆರವೇರಿತು. ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ಮಾಜಿ ಅಧ್ಯಕ್ಷೆ, ಪಡುಬಿದ್ರಿ ಬಂಟರ ಮಹಿಳಾ ಘಟಕಾದ್ಯಕ್ಷೆ   ಶ್ರೀಮತಿ ಜ್ಯೋತಿ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಭಾರತೀಯ ಸಂಸ್ಕೃತಿ ಆಚಾರ-ವಿಚಾರಗಳು ನಮ್ಮ ಮುಂದಿನ ಪೀಳಿಗೆಗೆ ಹಾಗೂ ಇಂದಿನ ಯುವಜನಾಂಗಕ್ಕೆ […]

  ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

(Padubidri) ಪಡುಬಿದ್ರಿ: ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣಾ ಸಮಾರಂಭ ಶನಿವಾರ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದಲ್ಲಿ ನೆರವೇರಿತು.

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ಮಾಜಿ ಅಧ್ಯಕ್ಷೆ, ಪಡುಬಿದ್ರಿ ಬಂಟರ ಮಹಿಳಾ ಘಟಕಾದ್ಯಕ್ಷೆ   ಶ್ರೀಮತಿ ಜ್ಯೋತಿ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ, ಭಾರತೀಯ ಸಂಸ್ಕೃತಿ ಆಚಾರ-ವಿಚಾರಗಳು ನಮ್ಮ ಮುಂದಿನ ಪೀಳಿಗೆಗೆ ಹಾಗೂ ಇಂದಿನ ಯುವಜನಾಂಗಕ್ಕೆ ತಿಳಿಯಪಡಿಸುವ ಕೆಲಸ ಸುಸಂಸ್ಕೃತ ಮಹಿಳೆಯರಿಂದ ಆಗಬೇಕಿದೆ. ವಿವಾಹ ವಿಚ್ಛೇದನ ನಿಲ್ಲಬೇಕಿದೆ. ಮಹಿಳೆಯರಿಗೂ ದಿನನಿತ್ಯ ಪೂಜನೀಯ ಸ್ಥಾನಮಾನ ಲಭಿಸಬೇಕಿದೆ. ಆ ಮೂಲಕ ಪುರುಷ ಪ್ರಧಾನ ಸಮಾಜದಲ್ಲಿ ಗೌರವದ ಸ್ಥಾನಮಾನ ನಮ್ಮದಾಗಿಸಿಕೊಳ್ಳೋಣ ಎಂದರು.

  ಮುಖ್ಯ ಅತಿಥಿಯಾಗಿದ್ದ ಶ್ರೀಮತಿ ಡಾ. ಅನಿತಾ ರಾಜಗೋಪಾಲ್ ಭಂಡಾರಿಯವರು ಮಹಿಳೆಯರಲ್ಲಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಪತ್ತೆ ಹಾಗೂ ನಿರ್ಮೂಲನೆ, ತಡೆಗಟ್ಟುವಿಕೆಯ ಕುರಿತು ಮಾಹಿತಿಯನ್ನು ನೀಡಿ ಸಂವಹನ ನಡೆಸಿದರು.

ಸಮಾರಂಭದಲ್ಲಿ ಕೃಷಿ ಕ್ಷೇತ್ರದ ಸಾಧಕಿ, ಕಾಪು ಪುರಸಭೆಯ ನಾಮ ನಿರ್ದೇಶಿತ ಸದಸ್ಯೆ ಶ್ರೀಮತಿ ಶಾಂತಲತಾ ಎಸ್. ಶೆಟ್ಟಿ, ಇತಿಹಾಸ ಪ್ರಸಿದ್ಧ ಕಾಪು ಶ್ರೀ ಮಾರಿಯಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಎಸ್. ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕ್ರೀಡಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮಂಡಳದ ಅಧ್ಯಕ್ಷರಾದ ಶ್ರೀಮತಿ ರೇಖಾ ಶೆಟ್ಟಿ ಸ್ವಾಗತಿಸಿದರು.

ವೇದಿಕೆಯಲ್ಲಿ ಮಹಿಳಾ ಮಂಡಳದ ಕೋಶಾಧಿಕಾರಿ ಶ್ರೀಮತಿ ವಿಮಲಾ ಕೆ. ಸಾಲ್ಯಾನ್ ಉಪಸ್ಥಿತರಿದ್ದರು.

ಮಹಿಳಾ ಮಂಡಳದ ಜೊತೆ ಕಾರ್ಯದರ್ಶಿ ಅಮೃತಾ ಶೆಟ್ಟಿ ಬಹುಮಾನಿತರನ್ನು ಪರಿಚಯಿಸಿದರು.

ಕಲಾ ದಯಾನಂದ್, ಶ್ರೀಮತಿ ಪ್ರತೀಕ್ಷಾ ಎಸ್. ಭಟ್, ಶ್ರೀಮತಿ ಶಶಿಕಲಾ ನವೀನ್ ಸನ್ಮಾನಿತರನ್ನು ಪರಿಚಯಿಸಿದರು.

 ಪ್ರಧಾನ ಕಾರ್ಯದರ್ಶಿ ಶ್ರೀಮತಿ ಅಮಣಿ ಕುಂದರ್ ವಂದಿಸಿದರು. ಉಪಾಧ್ಯಕ್ಷೆ ಶ್ರೀಮತಿ ವಾಣಿಗಣೇಶ್ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.