ಕಾಪು ಶಾಸಕರಿಂದ ಕೊಡಿಬೆಟ್ಟು ಗ್ರಾಪಂ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಉದ್ಘಾಟನೆ (Kaup MLA inaugurated various road works in Kodibettu village)

ಕಾಪು ಶಾಸಕರಿಂದ ಕೊಡಿಬೆಟ್ಟು ಗ್ರಾಪಂ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಉದ್ಘಾಟನೆ
(Udupi) ಉಡುಪಿ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು.
ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗ್ಗೇರ್ ಜಡ್ಡು – ಮೂತ್ತೂರು – ಕೊಂಡಾಡಿ ಸಂಪರ್ಕ ಸೇತುವೆ ಮತ್ತು ರಸ್ತೆ ಅಭಿವೃದ್ಧಿಗೆ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 3 ಕೋಟಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದಿ ಗ್ರಾಮದ ಪಾಣಾರಬೆಟ್ಟು ರಸ್ತೆ ಅಭಿವೃದ್ಧಿ 50 ಲಕ್ಷ, ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜಾರು ಗ್ರಾಮ ದುರ್ಗಾನಗರ ಮರಾಠಿ ಸಂಘ ರಸ್ತೆ ಅಭಿವೃದ್ಧಿ 25 ಲಕ್ಷ ಸೇರಿದಂತೆ ಒಟ್ಟು 3 ಕೋಟಿ 75 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್ ಮಡಿವಾಳ, ಉಪಾಧ್ಯಕ್ಷೆ ಇಂದಿರಾ ಕೆ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಪ್ರಮುಖರು, ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.