• Home  
  • ಮಂಗಳೂರು : ಸಿಸಿಬಿ ಪೊಲೀಸರಿಂದ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ, 75 ಕೋಟಿ ಮೌಲ್ಯದ ಮಾದಕ ವಸ್ತು ವಶ (Mangaluru: CCB police carry out biggest drug bust in state’s history, seizes drugs worth Rs 75 crore)
- ಅಪರಾಧ

ಮಂಗಳೂರು : ಸಿಸಿಬಿ ಪೊಲೀಸರಿಂದ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ, 75 ಕೋಟಿ ಮೌಲ್ಯದ ಮಾದಕ ವಸ್ತು ವಶ (Mangaluru: CCB police carry out biggest drug bust in state’s history, seizes drugs worth Rs 75 crore)

Share: ಮಂಗಳೂರು : ಸಿಸಿಬಿ ಪೊಲೀಸರಿಂದ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ, 75 ಕೋಟಿ ಮೌಲ್ಯದ ಮಾದಕ ವಸ್ತು ವಶ (Mangaluru) ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆಯಾಡಿದ್ದು, ಸರಿ ಸುಮಾರು ಅಂದಾಜು 75 ಕೋಟಿ ಮೌಲ್ಯದ ಮಾದಕ ವಸ್ತು ಎಂದು ಅಂದಾಜಿಸಲಾಗಿದ್ದು,  ಆಫ್ರಿಕಾ ಮೂಲದ ಇಬ್ಬರು ಮಹಿಳೆಯರು ಮತ್ತು ಸ್ಥಳೀಯ ಯುವಕನೋರ್ವನನ್ನು ಬಂಧಿಸಲಾಗಿದೆ.    ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಬಂಬಾ ಫಾಂಟಾ(31) ಹಾಗೂ ಅಬಿಗೈಲ್ […]

ಮಂಗಳೂರು : ಸಿಸಿಬಿ ಪೊಲೀಸರಿಂದ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ, 75 ಕೋಟಿ ಮೌಲ್ಯದ ಮಾದಕ ವಸ್ತು ವಶ

(Mangaluru) ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆಯಾಡಿದ್ದು, ಸರಿ ಸುಮಾರು ಅಂದಾಜು 75 ಕೋಟಿ ಮೌಲ್ಯದ ಮಾದಕ ವಸ್ತು ಎಂದು ಅಂದಾಜಿಸಲಾಗಿದ್ದು,  ಆಫ್ರಿಕಾ ಮೂಲದ ಇಬ್ಬರು ಮಹಿಳೆಯರು ಮತ್ತು ಸ್ಥಳೀಯ ಯುವಕನೋರ್ವನನ್ನು ಬಂಧಿಸಲಾಗಿದೆ.  

 ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಬಂಬಾ ಫಾಂಟಾ(31) ಹಾಗೂ ಅಬಿಗೈಲ್ ಅಡೋನಿಸ್ (30) ಬಂಧನಕ್ಕೆ ಒಳಗಾಗಿದ್ದಾರೆ. ಅವರಿಂದ 37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.  

  ಡ್ರಗ್ಸ್ ಮಾಫಿಯಾದ ಕಿಂಗ್ ಪಿನ್ ಅಬ್ದುಲ್ ಫೈಸಲ್‌ ಎಂಬಾತನನ್ನು ಬಂಧಿಸಲಾಗಿದ್ದು, ಆತ ಕೇರಳ, ಮಂಗಳೂರು ಮತ್ತು ಆಂದ್ರ ಪ್ರದೇಶದ ಲಿಂಕ್‌ ಹೊಂದಿದ್ದು, ಆತನಿಂದ ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿದ್ದೇವೆ. 6 ತಿಂಗಳ ಹಿಂದೆ ಮಂಗಳೂರಿನ ಪಂಪ್ ವೆಲ್ ಬಳಿ ಹೈದರ್ ಎಂಬವನನ್ನು ಬಂದಿಸಿದ್ದೆವು. ಆತನಿಂದ 15 ಗ್ರಾಂ ಡ್ರಗ್ ವಶಪಡಿಸಿದ್ದೆವು. ಆತನಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ಬಂಧನಕ್ಕೆ ಸಿಸಿಬಿ ಪೊಲೀಸರು ಆರು ತಿಂಗಳಿನಿಂದ ಕಾರ್ಯಾಚರಣೆ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

 ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ನೈಜೀರಿಯಾ ಪ್ರಜೆ ಪೀಟರ್‌ನನ್ನು ಬಂಧಿಸಿದ್ದೆವು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದೆವು. ಆತನ ಮಾಹಿತಿಯಂತೆ ಮತ್ತೆ ಕಾರ್ಯಾಚರಣೆ ಮಾಡಿ ಈ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದಿದ್ದರು. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇಬ್ಬರನ್ನು ಬಂಧಿಸಿದ್ದೇವೆ. ದಕ್ಷಿಣ ಆಫ್ರಿಕಾ ಮೂಲದ ಬಂಬಾ ಫಾಂಟಾ(31) ಹಾಗೂ ಅಬಿಗೈಲ್ ಅಡೋನಿಸ್ (30) ಬಂಧನಕ್ಕೆ ಒಳಗಾಗಿದ್ದಾರೆ. ಅವರಲ್ಲಿ 75 ಕೋಟಿ ಮೌಲ್ಯದ 37.878 ಕೆಜಿ ಎಂಡಿಎಂಎ ವಶಪಡಿಸಿದ್ದೇವೆ. 4 ಮೊಬೈಲ್ ಫೋನ್, 2 ಪಾಸ್ ಪೋರ್ಟ್, ಟ್ರಾಲಿ ಬ್ಯಾಗ್, 18,460 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.