• Home  
  • ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Malpe woman tied to a tree and brutally attacked: Minister Lakshmi Hebbalkar orders strict action)
- Uncategorised

ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Malpe woman tied to a tree and brutally attacked: Minister Lakshmi Hebbalkar orders strict action)

Share: ಮಲ್ಪೆ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ ಪ್ರಕರಣ : ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ (Bengaluru) ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ […]

(Bengaluru) ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

 ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ, ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

 ಇಂತಹ ಅನಾಗರೀಕ ವರ್ತನೆ ಸಹಿಸಲಾಗದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

 ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ಕುಮಾರ್‌ ಪ್ರತಿಕ್ರಿಯಿಸಿ, ಪ್ರಕರಣ ಮಂಗಳವಾರ ಮಲ್ಪೆಯಲ್ಲಿ ಘಟಿಸಿದೆ. ವಿಜಯಪುರ ಮೂಲದ ಮಹಿಳೆ ಮೀನು ಕದ್ದಿದ್ದಾರೆಂದು ಆರೋಪಿಸಿ, ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ, ಲಕ್ಷ್ಮೀಬಾಯಿ, ಸುಂದರ ಮತ್ತು ಶಿಲ್ಪಾ ಎಂಬವರು ಹಲ್ಲೆ ಮಾಡಿದ ಬಗ್ಗೆ ವಿಡಿಯೋ ಸಿಕ್ಕಿದೆ. ಅವರನ್ನು ಈಗಾಗಲೇ ಬಂಧಿಸಿ, ಅವರ ಮೇಲೆ ದಲಿತ ದೌರ್ಜನ್ಯ ಸಹಿತ ಹಲವು ಪ್ರಕರಣ ದಾಖಲಿಸಲಾಗಿದೆ.

ಇನ್ನೂ ಹಲವಾರು ಮಂದಿ ಆರೋಪಿಗಳಿದ್ದು, ಅವರನ್ನೂ ಶೀಘ್ರವಾಗಿ ಬಂಧಿಸಲಾಗುವುದು ಎಂದಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.