• Home  
  • ಮಜೂರು ಗ್ರಾ.ಪಂ ವಿವಿಧ ಇಲಾಖೆಯ ಸವಲತ್ತು ವಿತರಣೆ (Distribution of benefits of various departments of Majuru Gram Panchayat)
- ರಾಜಕೀಯ

ಮಜೂರು ಗ್ರಾ.ಪಂ ವಿವಿಧ ಇಲಾಖೆಯ ಸವಲತ್ತು ವಿತರಣೆ (Distribution of benefits of various departments of Majuru Gram Panchayat)

Share: ಮಜೂರು ಗ್ರಾ.ಪಂ ವಿವಿಧ ಇಲಾಖೆಯ ಸವಲತ್ತು ವಿತರಣೆ   (Majuru) ಮಜೂರು: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಯ ಸವಲತ್ತು ವಿತರಣಾ ಕಾರ್ಯಕ್ರಮ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು   ಕಾರ್ಯಕ್ರಮನ್ನು ಉದ್ಘಾಟಿಸಿ, ವಿವಿಧ ಸವಲತ್ತುಗಳನ್ನು ವಿತರಿಸಿದರು.  ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣಿ (RTC) ಮತ್ತು ಪೋಡಿ ನಕ್ಷೆ ಹಾಗೂ ಪಂಚಾಯತ್ ಶೇಕಡಾ […]

(Majuru) ಮಜೂರು: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಯ ಸವಲತ್ತು ವಿತರಣಾ ಕಾರ್ಯಕ್ರಮ ಮಜೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು   ಕಾರ್ಯಕ್ರಮನ್ನು ಉದ್ಘಾಟಿಸಿ, ವಿವಿಧ ಸವಲತ್ತುಗಳನ್ನು ವಿತರಿಸಿದರು.

 ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 92 ಹೇರೂರು ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣಿ (RTC) ಮತ್ತು ಪೋಡಿ ನಕ್ಷೆ ಹಾಗೂ ಪಂಚಾಯತ್ ಶೇಕಡಾ 5 ನಿಧಿಯಡಿ ಮಂಜೂರಾದ ವೀಲ್ ಚೇರ್ ಮತ್ತು ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ವಿತರಣೆ ಮಾಡಲಾಯಿತು.

 ಈ ಸಂದರ್ಭ ಕಾಪು ತಹಶೀಲ್ದಾರರಾದ ಪ್ರತಿಭಾ ಆರ್, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಳದೂರು ಪ್ರಸಾದ್‌ ಶೆಟ್ಟಿ, ಉಪಾಧ್ಯಕ್ಷೆ  ಮಂಜುಳಾ ಆಚಾರ್ಯ, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಸರ್ವೆ ಸೂಪರ್ಡೆಂಟ್ ನಾರಾಯಣ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲಾಸಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರ್ಣಿಮಾ ಹಾಗೂ ಮಜೂರು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.