• Home  
  • ಮಣಿಪಾಲ : ಬಸ್ ಟೈಮಿಂಗ್‌ ವಿಚಾರದಲ್ಲಿ ಗಲಾಟೆ : ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Manipal: Uproar over bus timings: Video of fight goes viral on social media)
- ಅಪರಾಧ

ಮಣಿಪಾಲ : ಬಸ್ ಟೈಮಿಂಗ್‌ ವಿಚಾರದಲ್ಲಿ ಗಲಾಟೆ : ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Manipal: Uproar over bus timings: Video of fight goes viral on social media)

Share:  ಮಣಿಪಾಲ : ಬಸ್ ಟೈಮಿಂಗ್‌ ವಿಚಾರದಲ್ಲಿ ಗಲಾಟೆ : ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Manipala) ಮಣಿಪಾಲ: ನಗರದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  ಎ.2ರಂದು ಸಂಜೆ 4:30 ಗಂಟೆಯ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ನ ಕಂಡಕ್ಟರ್‌ […]

(Manipala) ಮಣಿಪಾಲ: ನಗರದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

 ಎ.2ರಂದು ಸಂಜೆ 4:30 ಗಂಟೆಯ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌ನ ಕಂಡಕ್ಟರ್‌ ವಿಜಯ ಕುಮಾರ್‌ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌ ನಡುವೆ ಗಲಾಟೆ ನಡೆದಿದೆ. ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ.

 ‌ ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌(25), ಹಾಗೂ ಆನಂದ ಬಸ್ಸಿನ ಕಂಡಕ್ಟರ್‌ ವಿಜಯಕುಮಾರ್‌(25) ಎಂದು ಗುರುತಿಸಲಾಗಿದೆ.

ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಸ್‌ಗಳನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.