ಕುಂದಾಪುರ : ಗರಿಷ್ಠ ಅಂಕ ಪಡೆದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ
(Kundapura) ಕುಂದಾಪುರ-: ಎ:05 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಂದಾಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಯವರು ವಿತರಿಸಿದರು.
ಈ ಸಂದರ್ಭ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸರಕಾರದಿಂದ ಶಿಕ್ಷಣಕ್ಕಾಗಿ ಬೇರೆ ಬೇರೆ ಸವಲತ್ತುಗಳು ದೊರೆಯುತ್ತಿರುತ್ತದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ನಿಮ್ಮ ಮುಂದಿನ ವ್ಯಾಸಂಗದಲಿ ಅತಿ ಹೆಚ್ಚಿನ ಅಂಕಗಳು ಪಡೆದು ಕುಂದಾಪುರಕ್ಕೆ ಕೀರ್ತಿಯನ್ನು ತರುವಂತಾಗಲಿ ಎಂದು ವಿದ್ಯಾರ್ಥಿಗಳನ್ನು ಶುಭ ಹಾರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಲಕ್ಷ್ಮೀ ಪ್ರಾಸ್ತಾವಿಕ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಶುಭ ನುಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳು ಮಕ್ಕಳ ಪೋಷಕರು ಉಪಸಿತದ್ಧರು.

