ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಸಂಪನ್ನ
(Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.
ದೇವಳದ ತಂತ್ರಿ ವರ್ಯರಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಹಾಗೂ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣದ ಧಾರ್ಮಿಕ ಪ್ರಕ್ರಿಯೆ ನೆರವೇರಿತು.
ದೇವಳದಲ್ಲಿ ಬಲಿ ಸೇವೆಯ ಬಳಿಕ ಧ್ವಜಾರೋಹಣ ನೆರವೇರಿದ್ದು, ಸೋಮವಾರ ಏಪ್ರಿಲ್ 14ರಂದು ಶ್ರೀ ಮನ್ಮಹಾರಥೋತ್ಸವ ನೆರವೇರಲಿದೆ.
ಈ ಸಂದರ್ಭ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ , ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ವಾಸುದೇವ ಕೋಟ್ಯಾನ್, ಗುಂಡು ಬಿ ಅಮೀನ್, ದೇವಳದ ಪ್ರಬಂಧಕ ಸತೀಶ್ ಅಮೀನ್ ಸಹಿತ ದೇವಳದ ಆಡಳಿತ ಮಂಡಳಿಯ ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.

