ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ ಶ್ರೀ ಮನ್ಮಹಾರಥೋತ್ಸವ
(Uchila) ಉಚ್ಚಿಲ: ದ. ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು ಇಂದು ವಿವಿಧ ಪೂಜಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿದ್ಯುಕ್ತವಾಗಿ ಶ್ರೀ ಸನ್ನಿಧಿಯಲ್ಲಿ ಸಂಪನ್ನ ಗೊಂಡಿತು.
ದೇವಳದ ರಥೋತ್ಸವ ಕಾರ್ಯಕ್ರಮ ಮುಂದಿನ ಬುಧವಾರದ ವರೆಗೆ ನೆರವೇರಲಿದೆ.
ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ ಋತ್ವಿಜರ ಉಪಸ್ಥಿತಿಯಲ್ಲಿ ರಥಾರೋಹಣ ಕಾರ್ಯಕ್ರಮ ನೆರವೇರಿತು.
ಮದ್ಯಾಹ್ನ ಪಲ್ಲ ಪೂಜೆಯ ಬಳಿಕ ಮಹಾ ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭ ಮೊಗವೀರ ಮುಂದಾಳು ನಾಡೋಜಾ ಡಾ. ಜಿ ಶಂಕರ್(Nadoja DR G Shankar), ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕಾರ್ಯದರ್ಶಿ ಶರಣ್ ಮಟ್ಟು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿಅಮೀನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ, ಸುಭಾಷ್ಚಂದ್ರ ಕಾಂಚನ್, ಸುಧಾಕರ ಕುಂದರ್, ಕಾಪು ನಾಲ್ಕುಪಟ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಮನೋಜ್ ಕಾಂಚನ್, ಆನಂದ ಸಿ ಕುಂದರ್, ಗಂಗಾಧರ ಸುವರ್ಣ ಎರ್ಮಾಳು, ದಿನೇಶ್ ಎರ್ಮಾಳು, ದೇವಸ್ಥಾನದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್, ಸಮಿತಿಯ ಸದಸ್ಯರು, ಮೊಗವೀರ ಮಹಾಜನ ಸಂಘದ ಸದಸ್ಯರು, ಸಹಿತ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದರು.

